ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ
ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ…