ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.
ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….