ಮಾನವಿಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಸಚಿವರು ಇಂದು ಬೆಂಗಳೂರಿನಿಂದ ಬರುತ್ತಿರುವಾಗ ಮಾರ್ಗ ಮಧ್ಯದ ಬಿ ಆರ್ ಪಿಯಲ್ಲಿ  ಮುತ್ತಿನಕೊಪ್ಪದ ದಂಪತಿಗಳು ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುವಾಗ ಹಸುವಿಗೆ  ಬೈಕ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಗುವಿಗೆ ಗಾಯವಾಗಿತ್ತು. ಅದೇ ಸಂದರ್ಭಕ್ಕೆ ಅದೇ ಮಾರ್ಗದಲ್ಲಿ ಅಲ್ಲಿಗೆ ಬಂದ ಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಬಿ ಆರ್ ಪಿಯ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವಿಯತೆ ಮೆರೆದಿದ್ದಾರೆ. ಗೃಹ ಸಚಿವರ ಮಾನವೀಯತೆಯ ಕಾರ್ಯಕ್ಕೆ ಸಾಮಾಜಿಕ ಜಾಲಾತಾಣದಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Read More

ಕೋಣಂದೂರಿನ ಬಿಜೆಪಿ ಬೆಂಬಲಿತ ಸದಸ್ಯನ ದೌರ್ಜನ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಸೋಮವಾರ ಪತಿಭಟನೆ : ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ : ಗುರುವಾರ ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಗ ಸದಸ್ಯ ರವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಗ್ರಾಮ‌ ಪಂಚಾಯತ್ ಸದಸ್ಯತ್ವವನ್ನು  ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಸೋಮವಾರ ದಿನಾಂಕ 17/01/2022 ರಂದು ಮಾಜಿ ಸಚಿವರಾದ  ಕಿಮ್ಮನೆ ರತ್ನಾಕರ್ ರವರ ನೇತೃತ್ವದಲ್ಲಿ ತಾಲ್ಲೂಕು ತಹಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ.             (…

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

ಮಲೆನಾಡಲ್ಲೊಂದು ಹೃದಯವಿದ್ರಾವಕ ಘಟನೆ : ವ್ಯವಹಾರದಲ್ಲಿ ನಷ್ಟಕ್ಕೊಳಗಾದ ದಂಪತಿಗಳ ಆತ್ಮಹತ್ಯೆ

ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ. ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ‌. ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ…

Read More

ರಿಪ್ಪನ್ ಪೇಟೆಯ ಕಾಲೇಜುಗಳಿಗೆ ವಕ್ಕರಿಸಿರುವ ಮಹಮಾರಿ ಕೊರೊನಾ : ಇಂದು ಸಹ ಒಬ್ಬ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಧೃಡ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಈ ಕಾಲೇಜಿನಲ್ಲಿ ಸುಮಾರು 605 ವಿದ್ಯಾರ್ಥಿಗಳು ಇದ್ದಾರೆ. ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದ ಕಾರಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಕೊಡಲಾಗಿದೆ,ಹಾಗೂ ಕಾಲೇಜನ್ನು ಸಂಪೂರ್ಣವಾಗಿ…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More

ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ

ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ  ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…

Read More

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More