ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ.
ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ.
ಏನಿದು ಮಂಗನ ಕಾಯಿಲೆ?
ಮಂಗನ ಕಾಯಿಲೆ ಕೆ ಎಫ್ ಡಿವಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್ ವೈರಸ್) ಎಂಬ ವೈರಸ್ ನಿಂದ ಹರಡುವ ಕಾಯಿಲೆಯಾಗಿದೆ. 1957 ಮರಣ ಹೊಂದಿದ ಕೋತಿಯಲ್ಲಿ ಮೊದಲ ಬಾರಿಗೆ ಈ ವೈರಸ್ ಕಾಣಿಸಿಕೊಂಡಿತ್ತು.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ಮೊದಲು ಕಾಣಿಸಿಕೊಂಡ ಮಂಗನ ಜ್ವರಕ್ಕೆ ಕಾರಣವಾಗುವ ವೈರಸ್ ಗೆ ‘ಕ್ಯಾಸನೂರು’ ಎಂದೇ ನಾಮಕರಣ ಮಾಡಲಾಗಿದೆ! ರೋಗಗ್ರಸ್ತ ಕೋತಿಯ ದೇಹದಲ್ಲಿದ್ದ ಉಣ್ಣಿ ಅಥವಾ ಉಣುಗು(Tick) ಕೋತಿ ಮರಣ ಹೂಂದಿದ ನಂತರ ಉದುರಿ ಗಾಳಿಯ ಮೂಲಕ, ಅತವಾ ಜಾನುವಾರುಗಳ ಮೂಲಕ ಇಲ್ಲವೇ ನೇರವಾಗಿ ಮನುಷ್ಯನ ದೇಹಕ್ಕೆ ಅಂಟಿಕೊಳ್ಳುತ್ತದೆ. ಅದು ಕಚ್ಚುವುದರಿಂದ KFDV ವೈರಾಣು ಮನುಷ್ಯನ ದೇಹ ಪ್ರವೇಶಿಸಿ, ರೋಗ ಉಂಟು ಮಾಡುತ್ತದೆ. ಆದರೆ ಮನುಷ್ಯನಿಂದ ಮನುಷ್ಯನಿಗೆ ಈ ರೋಗ ಹರಡುವುದಿಲ್ಲ ಎಂಬುದು ಕೊಂಚ ಸಮಾಧಾನದ ವಿಚಾರ.