ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ.12 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.
ಸದ್ಯ ಶಿವಮೊಗ್ಗ ನಗರ ಶಾಂತಿಯುತವಾಗಿದೆ. ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ಬಜರಂಗ ದಳ ಕಾರ್ಯಕರ್ತ ಹರ್ಷ ಅಂತಿಮ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿ ಗಲಭೆ ಎಬ್ಬಿಸಿದವರ ವಿರುದ್ಧವು ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇