ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ತುಂಗಾ ಚಾನೆಲ್ ಗೆ ಕಾರು ಬಿದ್ದು ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ.
ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಸುಷ್ಮ.ಇ(28) ಮೃತ ದುರ್ಧೈವಿ.
ಸುಷ್ಮ ಮತ್ತು ಪತಿ ಚೇತನ್ ಕುಮಾರ್ ತುಮಕೂರಿನಲ್ಲಿರುವ ಅತ್ತೆಗೆ (ಚೇತನ್ ತಾಯಿಗೆ) ಎದೆ ನೋವು ಕಾಣಿಸಿಕೊಂಡಿದ್ದರಿಂದ ತುಮಕೂರಿಗೆ ಕಾರಿನಲ್ಲಿ ಹೊರಟಿದ್ದಾರೆ.
ನವೋದಯ ಕ್ವಾಟ್ರಸ್ ನಲ್ಲಿ ತಂಗಿದ್ದ ಪತಿ ಮತ್ತು ಪತ್ನಿ KA 06 C 5275 ಕ್ರಮಸಂಖ್ಯೆಯ ಟಾಟಾ ಇಂಡಿಕಾ ಕಾರಿನಲ್ಲಿ ಹೊರಟಿದ್ದಾರೆ.
ನವೋದಯ ಕ್ವಾಟ್ರಸ್ ನಿಂದ ಸೊಲ್ಲಾಪುರ-ಮಂಗಳೂರು ಹೈವೆಗೆ ತಲುಪಲು ಸ್ವಲ್ಪ ದೂರ ತುಂಗ ಚಾನೆಲ್ ನ ಏರಿ ಮೇಲೆ ಸಾಗಬೇಕಿದೆ. ಈ ಟಾರ್ ರಸ್ತೆಯ ಮೇಲೆ ಬರುವ ವೇಳೆ ಬೆಳಗ್ಗಿನ ಜಾವ ಹಾವೊಂದು ಅಡ್ಡ ಬಂದಿದೆ.ಚೇತನ್ ಕುಮಾರ್ ಹಾವು ಅಡ್ಡ ಬಂದ ಹಿನ್ನಲೆಯಲ್ಲಿ ಸಡನ್ ಆಗಿ ಕಾರಿನ ಬಲಗಡೆ ತಿರುಗಿಸಿದ್ದಾರೆ. ಚಾನೆಲ್ ಗೆ ಕಾರು ಇಳಿದಿದೆ. ಚಾನೆಲ್ ನಲ್ಲಿ ನೀರು ಅಧಿಕವಾಗಿರುವುದರಿಂದ ಕಾರನ್ನೇ ನೀರು ತೇಲಿಸಿಕೊಂಡು ಮಧ್ಯಭಾಗಕ್ಕೆ ಕರೆದೊಯ್ದಿದೆ.
ತಕ್ಷಣವೇ ಚೇತನ್ ಕುಮಾರ್ ಕಾರಿನಿಂದ ಇಳಿದು ಪತ್ನಿಯನ್ನ ಬಚಾವ್ ಮಾಡಲು ಮುಂದಾಗಿದ್ದಾರೆ. ನೀರಿನಲ್ಲಿಯೇ ಸುಷ್ಮರವರನ್ನ ಹಿಡಿದಿಟ್ಟುಕೊಂಡಿದ್ದಾರೆ. ಸಹಾಯಕ್ಕಾಗಿ ಕೂಗಿದ್ದಾರೆ. ಬೆಳಗ್ಗಿನ ಜಾವವಾಗಿದ್ದರಿಂದ ಯಾರಿಗೂ ಇವರ ಕೂಗು ಕೇಳಲಿಲ್ಲ.
ಸುಮಾರು 1 ಗಂಟೆಯ ವರೆಗೆ ಕೂಗಿದರೂ ಸಕಾಲದಲ್ಲಿ ಯಾರೂ ಬಾರದ ಹಿನ್ನಲೆಯಲ್ಲಿ ಸುಷ್ಮ ನೀರು ಕುಡಿದಿದ್ದಾರೆ. 1 ಗಂಟೆಯ ಬಳಿಕ ಗ್ರಾಮಸ್ಥರು ಇವರು ಶಬ್ದ ಕೇಳಿ ಸ್ಥಳಕ್ಕೆ ಬಂದು ಚೇತನ್ ಕುಮಾರ್ ಹಾಗೂ ಸುಷ್ಮಾ ರವರನ್ನು ದಡಕ್ಕೆ ತಂದಿದ್ದಾರೆ. ಆದರೆ ಅಷ್ಟರೊಳಗೆ ಸುಷ್ಮಾ ಸಾವನ್ನಪ್ಪಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್