ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ.


ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ ನಾವುಗಳು ಸಹ ಕೇಸರಿ ಶಾಲು ಕೂರುತ್ತೇವೆ.ಇದಕ್ಕೆ ಅವಕಾಶ ಕಲ್ಪಿಸದೆ  ನೀವು ನಮ್ಮನ್ನ ತಡೆಯುವುದು ನಾವು ಒಪ್ಪುವುದಿಲ್ಲ ಸಮವಸ್ತ್ರ ಕಡ್ಡಾಯ ಮಾಡಿದರೆ ನಾವು ಒಪ್ಪುತ್ತೇವೆ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಕೂರಲು ಅವಕಾಶ ಕಲ್ಪಿಸಿಕೊಡಬಾರದು ಎಂಬುದಾಗಿ ಅವರು ಮನವಿಯಲ್ಲಿ ಕೋರಿಕೊಂಡಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್ ಡೌನ್ ಹೇರಿಕೆಯಿಂದ ರಾಜ್ಯದಲ್ಲಿ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದ್ದು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳಲ್ಲಿ ಈ ರೀತಿ ಧರ್ಮಗಳ ನಡುವಿನ ಸಂಘರ್ಷ ನಿಜಕ್ಕೂ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಾಧ್ಯತೆಗಳಿದ್ದು ಈ ಬಗ್ಗೆ ಸರ್ಕಾರ ಹಾಗೂ ವಿವಿಧ ಧಾರ್ಮಿಕ ಮುಖಂಡರುಗಳು ಊರಿನ ನಾಗರಿಕರು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಕ್ಷಣ ಈ ಸಂಘರ್ಷವನ್ನು ಮುಕ್ತಾಯಗೊಳಿಸುವ ಜವಾಬ್ದಾರಿ ಇದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago