ಆನಂದಪುರ ಸಮೀಪದ ಹೊಸಗುಂದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತವಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಲಾರಿ (KA 05 AA 5068 ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಗುದ್ದಿದ ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಈ ಅಪಘಾತದಲ್ಲಿ ಲಾರಿ ಡ್ರೈವರ್ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.