ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ ಆರೂಢ ಶ್ರೀ ಪ್ರಶಸ್ತಿ ಲಭಿಸಿರುವುದು ನಮಗೆ ಅತೀವ ಸಂತಸ ತಂದಿದೆ. ಅವರಿಂದ ಇನ್ನಷ್ಟು ಕಾರ್ಯವಾಗಲಿ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಶಾಂತ ರಿಪ್ಪನ್ ಪೇಟೆ ಅವರು ಚಿಕ್ಕಮುನವಳ್ಳಿ ಆರೂಢ ಮಠದಿಂದ ಆರೂಢ ಶ್ರೀ ಪ್ರಶಸ್ತಿ ಸ್ವೀಕರಿಸುತ್ತಿರುವುದು ತುಂಬಾ ಸಂತೋಷ ಸಂಗತಿ. ನಾವು ಮಾಡುವ ಕಾರ್ಯಗಳಿಗೆ ಮತ್ತಷ್ಟು ಶಕ್ತಿ ತುಂಬಿದೆ ಎಂದರು.
ಈ ಸಂದರ್ಭದಲ್ಲಿ ಧಾರವಾಡದ ಇಂಚಗೇರಿ ಆಧ್ಯಾತ್ಮ ಸಂಪ್ರದಾಯದ ಪೂಜ್ಯ ಶ್ರೀ ಶ್ರೀ ಶಶಿಕಾಂತ ಫಡಸಲಗಿ ಗುರುಗಳು, ಪೂಜ್ಯ ಶ್ರೀ ರಮೇಶ ಗುರುಗಳು ಧಾರವಾಡ, ಬೆಳಗಾವಿ ಆರ್ಟಿಒ ಅಧಿಕಾರಿ ಶ್ರೀ ಶಿವಾನಂದ ಮಗದುಮ್ ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್