ಪದವಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಇಚ್ಚೆಯ ಉಡುಪು ಧರಿಸಿ ಕಾಲೇಜಿಗೆ ಬರಬಹುದು : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ನಾಳೆಯಿಂದ ಪದವಿ ಕಾಲೇಜು ಆರಂಭಿಸಲು ಸರಕಾರ ಬದ್ದವಾಗಿದೆ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‍.ಅಶ್ವತ್ಥನಾರಾಯಣ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದರು.

ಬುಧವಾರದಿಂದ ಕಾಲೇಜುಗಳು ಆರಂಭವಾಗಲಿದೆ. ಕಾಲೇಜುಗಳಿಗೆ ಹೊರಗಡೆಯಿಂದ ಬರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ಘಟನೆಗಳಿಗೆ ಅವಕಾಶ ಕೊಡದೆ, ಸೌಹಾರ್ದದಿಂದ ಕಾಲೇಜುಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಿದರು.

ಹಿಜಾಬ್ ಹಾಗೂ ಕೇಸರಿ ಶಾಲು ಬಗ್ಗೆ ಪರ ವಿರೋಧ ಎನ್ನುವ  ಮಾತು ಬೇಡ ಎಲ್ಲರೂ ಕಾನೂನು ಪಾಲಿಸಬೇಕು ಎಂದು ಹೇಳಿ ನ್ಯಾಯಾಲಯದ ತೀರ್ಪು ಪಾಲನೆಗೆ ಎಲ್ಲರೂ ಬದ್ದರಾಗಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *