ಫೆ. 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ :

ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ  ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ  ಹೊರಡಿಸಿದೆ.
ಹೌದು, ರಾಜ್ಯದ ಸಮವಸ್ತ್ರ ವಿವಾದ ಭುಗಿಲೆದ್ದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಫೆ.16 ವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ.
ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕಾಲೇಜುಗಳಿಗೆ ಫೆಬ್ರವರಿ 16ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದ್ದು ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇನ್ನೂ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ರಾಜ್ಯದಲ್ಲಿ ‘ಸಮವಸ್ತ್ರ’ ವಿವಾದ ಹಿನ್ನೆಲೆ ಇಂದು ಸಂಜೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. . ವರ್ಚುವಲ್ ಮೂಲಕ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಸೋಮವಾರದಿಂದ 10ನೇ ತರಗತಿಯವರೆಗೆ ಅಂದ್ರೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಲಿದ್ದು, ನಂತ್ರ ಪೂರ್ವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನ ಪುನರಾರಂಭಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ‘ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಲಿದ್ದು, ನಂತ್ರ ಪೂರ್ವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನ ಪುನರಾರಂಭಿಸಲಾಗುವುದು’ ಎಂದರು.ಇನ್ನೂ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ರಾಜ್ಯದಲ್ಲಿ ‘ಸಮವಸ್ತ್ರ’ ವಿವಾದ ಹಿನ್ನೆಲೆ ಇಂದು ಸಂಜೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. . ವರ್ಚುವಲ್ ಮೂಲಕ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

5 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

12 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

13 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

17 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

21 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

24 hours ago