ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ 12 ಮಂದಿ ಪೊಲೀಸ್ ವಶಕ್ಕೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ.12‌ ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.

ಸದ್ಯ ಶಿವಮೊಗ್ಗ ನಗರ ಶಾಂತಿಯುತವಾಗಿದೆ. ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ಬಜರಂಗ ದಳ ಕಾರ್ಯಕರ್ತ ಹರ್ಷ ಅಂತಿಮ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿ ಗಲಭೆ ಎಬ್ಬಿಸಿದವರ ವಿರುದ್ಧವು ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

16 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago