ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು.
ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ. ಇಡೀ ರಾಜ್ಯದ ಹಿಂದೂ ಸಮಾಜ ಹರ್ಷನ ಕೊಲೆಯನ್ನು ಖಂಡಿಸುತ್ತಿದೆ. ಕುಟುಂಬಕ್ಕೆ ಆದ ಅನ್ಯಾಯವನ್ನು ಬಿಡುವುದಿಲ್ಲ ಅಂತ ಸಿಎಂ ಹೇಳಿದ್ದಾರೆ. ಕುಟುಂಬಕ್ಕೆ ಏನೇನೂ ಪರಿಹಾರ ಕೊಡಬೇಕು ಅದನ್ನು ಕೊಡುವ ಭರವಸೆ ಸಿಎಂ ನೀಡಿದ್ದಾರೆ ಎಂದರು.