Headlines

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.

ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು.

ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

Exit mobile version