ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು.
ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300 ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು.
ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು ನೀಡಬೇಕೆಂದಿದ್ದಾರೆ.ಭ್ರಷ್ಟಾಚಾರವಂತೂ ನಡೆದಿದೆ ಇಲ್ಲ ಎಂದು ಹೇಳಲು ಸಾಧ್ಯವೇ ಇಲ್ಲ ಎಂದರು.
ಅವರಿಗೆ ಹಣ ಕೊಟ್ಟವರು ನಮ್ಮ ಜೊತೆಯೇ ಇದ್ದಾರೆ.ಅವರು ಸನ್ನಿಧಿಯಲ್ಲಿ ದೇವರೇ ನಾವೂ ಹಣವನ್ನು ಕೊಟ್ಟಿದ್ದೆವೆ ನೀನೇ ನೋಡಿಕೋ ಎಂದು ಅವರು ಕೂಡ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿಸಿದರು.ಅವರಿಗೆ ಅಧಿಕಾರ ಇದೆ ಹೀಗಾಗಿ ಹಣ ಕೊಟ್ಟವರು ಹೇಳಲು ಹೆದರುತ್ತಿದ್ದಾರೆ.
ಹಣ ಪಡೆದಿರುವುದಕ್ಕೆ ದೇವರೇ ಸಾಕ್ಷಿ ನೀನೇ ನೋಡಿಕೋ ಎಂದು ನಾವು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತ ಬೇಳೂರು ಪಲಾಯನ ಮಾಡುವ ಮನುಷ್ಯ ಅಲ್ಲ ಅವರಿಗೆ 10 ಘಂಟೆಯಿಂದ 12 ಘಂಟೆವರೆಗೆ ಸಮಯ ನಿಗದಿಪಡಿಸಿದ್ದೆವು.ಅವರು ಮುಂಚಿತವಾಗಿ ಹೋಗಿರುವುದಕ್ಕೆ ನಾವು ಹೊಣೆಯಲ್ಲ ಎಂದು ತಿಳಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್