ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ.


ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದ್ದರು.

ಇದೀಗ ಈ ಸವಾಲನ್ನು ಸ್ವೀಕರಿಸಿರುವ ಶಾಸಕ ಹರತಾಳು ಹಾಲಪ್ಪನವರು ನಾನು ಯಾವುದೇ ಮರಳು ಲಾರಿ ಮಾಲೀಕರಿಂದ ಕಮಿಷನ್ ಪಡೆದಿಲ್ಲ.
ಅವರ ಸವಾಲಿನಂತೆ ನಾನು ಧರ್ಮಸ್ಥಳದ ಸನ್ನಿಧಿಯಲ್ಲಿ ಫೆಬ್ರವರಿ 13 ರಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಆಣೆ ಪ್ರಮಾಣಕ್ಕೆ ಅವರೂ ಸಹ ಬರಬೇಕು ಹಾಗೂ ಯಾರಿಂದ ನಾನು ಕಮಿಷನ್ ಪಡೆದಿದ್ದೇನೆಂದು ಅವರನ್ನು ಕರೆಸಿ ಅವರ ಮೂಲಕ ಆಣೆ ಮಾಡಿಸಬೇಕೆಂದು ಸವಾಲೆಸೆದರು.

ನನ್ನ ರಾಜಕೀಯ ಜೀವನದಲ್ಲಿ ಯಾರಿಂದಲೂ ಕಮಿಷನ್ ಪಡೆಯುವ ಜಾಯಮಾನ ನನ್ನದಲ್ಲ ಎಂದು ತಿಳಿಸಿದರು.

ಒಟ್ಟಾರೆಯಾಗಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಮೇಲಾಟ ಹಿಂದೊಮ್ಮೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ರವರ ಘಟನೆ ನೆನಪಿಸುತ್ತಿದೆ.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

6 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

6 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

6 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

9 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

12 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

13 hours ago