ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ, ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು.
ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ ಪದಾರ್ಥಗಳ ವ್ಯವಸ್ಥೆ ಮಾಡಿಕೊಳ್ಳ ಬೇಕಾಗಿದೆ. ಇದನ್ನು ಕಂಡ ಗೋಪಾಲ ಕೃಷ್ಣ ಬೇಳೂರು ಅಭಿಮಾನಿ ಬಳಗದವರು ಮನೆಯ ಮೇಲ್ಛಾವಣಿಯು ಸಂಪೂರ್ಣ ದುರಸ್ತಿ ಆಗಿದ್ದನ್ನು ಕಂಡು ಮೇಲ್ಚಾವಣಿ ಹಾಕಿಕೊಟ್ಟರಲ್ಲದೆ ವೃದ್ಧ ದಂಪತಿಗಳಿಗೆ ಧನಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ವಿಶ್ವನಾಥ, ಬರುವೆ ಮಂಜಣ್ಣ, ನಿಟ್ಟೂರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನಾಗೇಂದ್ರ ಜೋಗಿ, ಗ್ರಾಮ ಪಂಚಾಯತಿ ಸದಸ್ಯ ಶೋಭಾ ಉದಯ್, ಉದಯ್, ಪ್ರಕಾಶ್ ಶೆಟ್ಟಿ, ಸಣ್ಣಕ್ಕಿ ಮಂಜು, ಸುದೀಪ್.ಬಿ.ಸಿ, ಗೋಪಿನಾಥ್ ಜಯನಗರ, ತ್ರಿಭುವನ್, ವಕೀಲರು ಬಸರಾಜ್ ಗಗ್ಗಾ, ಪ್ರಭು ಸೇರಿದಂತೆ ಸಮಸ್ತ ಕಾಂಗ್ರೆಸ್ ಘಟಕ ನಿಟ್ಟೂರು ಹಾಗೂ ಸಮಸ್ತ ಗ್ರಾಮಸ್ಥರು ಬೇಳೂರು ಗೋಪಾಲ ಕೃಷ್ಣ ಅಭಿಮಾನಿ ಬಳಗ ಅನೇಕರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್