ಯಡಿಯೂರಪ್ಪ ಹುಟ್ಟುಹಬ್ಬ: 79 ಕೆಜಿ ಕೇಕ್​ ಕತ್ತರಿಸಿ ಅಭಿಮಾನಿಗಳ ಸಂತಸ ಹೆಚ್ಚಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಭಾನುವಾರ ಸರಳವಾಗಿ ಆಚರಿಸಿದರು. ಗಣ್ಯರು, ಅಭಿಮಾನಿಗಳು ಬಿಎಸ್​ವೈ ಅವರಿಗೆ ಶೂಭಕೋರಿದ್ದಾರೆ.


ಬೆಂಗಳೂರಲ್ಲಿ ಬಿಎಸ್​ವೈ ಬೃಹತ್​ ಕೇಕ್​ ಕತ್ತರಿಸಿದರು. ತವರು ಕ್ಷೇತ್ರ ಶಿಕಾರಿಪುರ, ಶಿರಾಳಕೊಪ್ಪ, ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಬಿಎಸ್​ವೈ ಅಭಿಮಾನಿಗಳು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

79 ಕೆಜಿ ತೂಕದ ಕೇಕ್ ಕತ್ತರಿಸಿದ ಬಿಎಸ್‌ವೈ:

ಬಿಎಸ್‌ವೈ 79ನೇ ಜನ್ಮ ದಿನದ ನಿಮಿತ್ತ 79 ಕೆ.ಜಿ. ತೂಕದ ಕೇಕ್‌ ಅನ್ನು ಕಾವೇರಿ ನಿವಾಸದಲ್ಲಿ ಬಿಎಸ್‌ವೈ ಕತ್ತರಿಸುವ ಮೂಲಕ ಅಭಿಮಾನಿಗಳು ಹಾಗೂ ಬೆಂಬಲಿಗರನ್ನು ಖುಷಿಪಡಿಸಿದರು. ಗೋಪೂಜೆ ಸಲ್ಲಿಸಿದ ಬಳಿಕ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಲು ಬೆಳಗ್ಗೆ ಆಗಮಿಸಿದ ಬಿಎಸ್‌ವೈ ಅವರನ್ನು ಪೂರ್ಣ ಕುಂಭದೊಂದಿಗೆ ಬರ ಮಾಡಿಕೊಳ್ಳಲಾಯಿತು. ಮಾಜಿ ಸಚಿವರು, ಶಾಸಕರು ಜತೆಗಿದ್ದರು.

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಮೊಮ್ಮಗಳ ಆರತಕ್ಷತೆಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಪಾಲ್ಗೊಂಡು ಆರ್ಶೀವದಿಸಿದರು.
ಶಿವಮೊಗ್ಗದ ಪ್ರೇರಣಾ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.

‘ಆತ್ಮೀಯರೇ, ಹಿತೈಷಿಗಳೇ, ಕೊರೋನಾ ಸಂಕಷ್ಟಗಳ ಹಿನ್ನೆಲೆಯಲ್ಲಿ ಈ ಬಾರಿ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆರ್ಶೀವಾದಗಳೇ ನನಗೆ ಶ್ರೀರಕ್ಷೆ’ ಎಂದು ಬಿಎಸ್​ವೈ ಶನಿವಾರವೇ ಟ್ವೀಟ್​ ಮೂಲಕ ಮನವಿ ಮಾಡಿದ್ದರು. ಆದಾಗ್ಯೂ ಹಲವು ಗಣ್ಯರು ಬಿಎಸ್​ವೈ ಅವರನ್ನ ಭೇಟಿಯಾಗಿ ಶುಭ ಕೋರಿದರು.

‘ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲೆಂದು ಪ್ರಾರ್ಥಿಸುತ್ತೇನೆ‌’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

6 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

6 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

11 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

13 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago