ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ

ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.‌

ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ ಮೂಲಕ ಘಟನೆಗೆ ಪ್ರಚೋದನೆ ನೀಡಿದ್ದಾರೆ.

ಇದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದಲ್ಲದೆ ಈಶ್ವರಪ್ಪನವರು ರಾಷ್ಟ್ರದ್ರೋಹಿಗಳಾಗಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ಈಶ್ವರಪ್ಪನವರ ಮೇಲೆ ಕೇಸು ದಾಖಲಿಸಬೇಕು ಹಾಗೂ ಸದನದಲ್ಲಿ ಈ ವಿಚಾರವನ್ನು ಉಚ್ಚರಿಸಲು ನಡವಳಿ ಪ್ರಕಟಿಸಬೇಕೆಂದು ಸ್ಪೀಕರ್ ಗೆ ಒತ್ತಾಯಿಸಿದ್ದರು.‌

ಆದರೆ ಸ್ಪೀಕರ್ ಅವರು ಪಕ್ಷಪಾತವಾಗಿ ಯಾವುದೇ ನಿಲುವಳಿಗೆ ಅವಕಾಶವಿಲ್ಲ,ಹಾಗೂ ಈಶ್ವರಪ್ಪ ಹೇಳಿಕೆಯನ್ನು ಸಮರ್ಥಿಸುವ ಮೂಲಕ ಸ್ಪೀಕರ್ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಕೂಡಲೇ  ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಎನ್ ಎಸ್‌ಯು‌ಐ ಮನವಿಯಲ್ಲಿ ಆಗ್ರಹಿಸಿದೆ.‌

ಈ ಸಂದರ್ಭದಲ್ಲಿ ಎನ್ ಎಸ್ ಯು ಐ ನ ರಾಜ್ಯ ಕಾರ್ಯದರ್ಶಿ  ಬಾಲಾಜಿ ಶಿವಮೊಗ್ಗ ನಗರ ಮಾಜಿ ಶಾಸಕರಾದ ಶ್ರೀ ಕೆ. ಬಿ. ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ಸದಸ್ಯ ಹೆಚ್. ಸಿ. ಯೋಗೆಶ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಶ್ರೀಮತಿ ಪಲ್ಲವಿ, ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಅಧ್ಯಕ್ಷ ಮಹಮ್ಮದ್ ನಿಹಾಲ್, ದೀಪಕ್ ಸಿಂಫ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಾಬಣ್ಣ, ಯುವ ಕಾಂಗ್ರೆಸ್ ನ ಜಿಲ್ಲಾ ಕಾರ್ಯದರ್ಶಿ ಪುರ್ಲೆ ಮಂಜು, ಯುವ ಮುಖಂಡರಾದ ಸಂದೀಪ್ ಮಂಜುನಾಥ್, ಇತರರು ಹಾಜರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

2 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

2 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

12 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

19 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

21 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 day ago