ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆ : ದಿನಾಂಕ 16 ರ ಬುಧವಾರ,ಸಮಯ ಸಂಜೆ 3:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ನ ಕುವೆಂಪು ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕೆರೆಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆರೆಹಳ್ಳಿ ಹೋಬಳಿಯ ರಿಪ್ಪನ್ ಪೇಟೆ ,ಬಾಳೂರು ,ಹರತಾಳು,ಬೆಳ್ಳೂರು , ಕೆಂಚನಾಲ , ಅರಸಾಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಜಿ, ನಾಗರಾಜ್,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಾಕರ್ ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ ಕಾನುಗೋಡು ,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಶರೀಫ್ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್, ಈಶ್ವರಪ್ಪ ಗೌಡ್ರು ಎಂ ಬಿ ಲಕ್ಷ್ಮಣಗೌಡ, ಚಂದ್ರೇಶ್, ಅಮೀರ್ ಹಂಝ, ರಾಜಣ್ಣ,ರಿಪ್ಪನ್ ಪೇಟೆ ಗ್ರಾಪಂ ಸದಸ್ಯರುಗಳಾದ ಮಧುಸೂದನ್, ಗಣಪತಿ,ಪ್ರಕಾಶ್ ಪಾಳೆಕಾರ್,ಧನಲಕ್ಷ್ಮೀ,ಸಾರಬಿ,
ವೇದವತಿಪರಮೇಶ್ , ನಿರೂಪಮರಾಕೇಶ್,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾದ ಉಲ್ಲಾಸ,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ,ಮತ್ತು ಮುಖಂಡರಾದ ರವೀಂದ್ರ ಕೆರೆಹಳ್ಳಿ,ಮಳವಳ್ಳಿ ಮಂಜುನಾಥ್ , ರಮೇಶ್ ಫ಼್ಯಾನ್ಸಿ ಹಾಗೂ ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಮಹಿಳಾ ಮುಖಂಡರು, ಗ್ರಾಮ ಪಂಚಾಯತ್ ಹಾಲಿ, ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು,ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗುವಂತೆ ತಿಳಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

9 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

17 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago