ರಿಪ್ಪನ್ ಪೇಟೆ : ಮೂಗೂಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡ ದಲ್ಲಿರುವ ರೈತರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ ಆನೆಯೊಂದು ದಾಳಿ ನಡೆಸಿ ಅಡಿಕೆ ತೋಟ ಹಾನಿಗೊಳಿಸಿದ ಘಟನೆ ನಡೆದಿದೆ.
ರೈತ ಪರಶುರಾಮ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಆನೆಯು ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ರೈತರಿಗೆ ನಷ್ಟವನ್ನುಂಟು ಮಾಡಿದೆ.ಅನಾಹುತದ ಘಟನೆಯನ್ನು ತಿಳಿದ ಗ್ರಾಮಸ್ಥರು ತೋಟಕ್ಕೆ ಆಗಮಿಸಿ ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ ಆದರೆ ಈಗ ಏಕಾಏಕಿ ರಾತ್ರಿ ವೇಳೆಯಲ್ಲಿ ರೈತರ ಜಮೀನುಗಳಿಗೆ ದಾರಿ ಹಿಡಿದಿರುವುದು ಭಯವುಂಟು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸ್ಥಳಕ್ಕೆ ಅರಣ್ಯಾಧಿಕಾರಿ ರಾಜ ಅಹ್ಮದ್ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲಿಸಿ ಆನೆ ಬಂದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ರೈತರು ಹೊಲಗದ್ದೆಗಳಿಗೆ ತೆರಳುವಾಗ ಮುಂಜಾಗ್ರತೆ ವಹಿಸುವುದು ಸೂಕ್ತ ಒಂದೆರಡು ದಿನಗಳಲ್ಲಿ ಆನೆಯ ಚಲನವಲನವನ್ನು ಗಮನಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಈ ಪ್ರದೇಶದಲ್ಲಿ ಕಾಡಾನೆ ಓಡಾಟದ ಬಗ್ಗೆ ಮಾಹಿತಿ ಇರಲಿಲ್ಲ ಇದೇ ಮೊದಲು ಆನೆ ದಾಳಿ ಘಟನೆ ನಡೆದಿದೆ ತಿಳಿದುಬಂದಿದೆ ರೈತರು ಮತ್ತು ಸಾರ್ವಜನಿಕರು ಹೊಲಗದ್ದೆಗಳಿಗೆ ಅರಣ್ಯ ಪ್ರದೇಶದ ಎಚ್ಚರಿಕೆ ವಹಿಸಬೇಕು ಮತ್ತು ಮತ್ತೆ ಆನೆ ಕಾಣಿಸಿಕೊಂಡರೆ ತಕ್ಷಣ ಇಲಾಖೆ ಮಾಹಿತಿ ತಿಳಿಸಿ ಎಂದು ಮೂಗೂಡ್ತಿ ವನ್ಯಜೀವಿ ವಲಯದ RFO ಅಫ್ರಿನಾಜ಼್ ಶುಂಠಿ ಹೇಳಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್