ರಿಪ್ಪನ್ ಪೇಟೆ : 4.30 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಹರತಾಳು ಹಾಲಪ್ಪ : ಫೆ.12 ರಂದು ಧರ್ಮಸ್ಥಳಕ್ಕೆ ಆರೋಪಿತರಿಗೆ ಶಾಸಕ ಹಾಲಪ್ಪ ಆಹ್ವಾನ

ರಿಪ್ಪನ್ ಪೇಟೆ : ಸುಳ್ಳು ಹೇಳಿಕೆ ಕೊಟ್ಟು ಪಲಾಯನಗೈಯುವ ಹುಡುಗಾಟದ ಕೆಲಸವನ್ನು ಮಾಡದೇ ಫೆಬ್ರವರಿ 12 ರಂದು ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಗೆ ಬಂದು ನಾನು ಹಣ ಪಡೆದಿರುವುದನ್ನು ಸಾಬೀತುಪಡಿಸಲಿ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಸವಾಲು ಹಾಕಿದರು.

ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪೂಜಾರದಿಂಬದಲ್ಲಿ  ಬುಧವಾರ ನೂತನವಾಗಿ ನಿರ್ಮಾಣವಾಗಿರುವ 4.30 ಕೋಟಿ ವೆಚ್ಚದ ಪಿಎಂಜಿಎಸ್ ವೈ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಮಾತನಾಡಿದ ಶಾಸಕರು ಸಾಗರ ಕ್ಷೇತ್ರದಲ್ಲಿ ವ್ಯಕ್ತಿಯೋರ್ವ ನನ್ನ ಮೇಲೆ ಆಧಾರ ರಹಿತವಾದ ಆರೋಪ ವನ್ನು ಮಾಡುತ್ತಿದ್ದಾನೆ. ಈತನ ಕಾಲಾವಧಿಯಲ್ಲಿ 1ಲೋಡ್ ಮರಳಿಗೆ ಇಪ್ಪತ್ತೈದು ಸಾವಿರ ರೂಪಾಯಿ ದರ ಇತ್ತು. ಈಗ ಹದಿನೈದು ಸಾವಿರ ರೂಗಳಿಗೆ ಮರಳು ಜನಸಾಮಾನ್ಯರಿಗೆ ದೊರಕುತ್ತಿದೆ. ಆಗ ಆತ ಮಾಡಿದ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಹೇಳಿಕೆ ನೀಡುತ್ತಿದ್ದಾನೆ. ಆದ್ದರಿಂದ ಹಣ ಪಡೆದಿದ್ದೇನೆ ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುವಂತೆ ಪಂಥಾಹ್ವಾನ ಕೂಡ ನೀಡಿರುತ್ತಾನೆ.

ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ನಾನು ಪ್ರಾಮಾಣಿಕವಾಗಿ ಇರಬೇಕೆಂಬುವುದು ನನ್ನ ಉದ್ದೇಶ ಆದರೆ ವೃಥಾ ಆರೋಪಗಳನ್ನು ಸಹಿಸಲು ಸಾಧ್ಯವಿಲ್ಲ ಆದ್ದರಿಂದ ಫೆಬ್ರವರಿ 12 ರ ಶನಿವಾರ ನಾನು ಧರ್ಮಸ್ಥಳಕ್ಕೆ ಹೋಗುತ್ತಿದ್ದೇನೆ. ನಾನು ಹಣ ಪಡೆದಿರುವ ಬಗ್ಗೆ ಆರೋಪಿಸಿರುವ ವ್ಯಕ್ತಿಗಳು ಬಂದು ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಸಾಬೀತುಪಡಿಸಲಿ. ಹೇಳಿಕೆ ಕೊಟ್ಟು ಪಲಾಯನಗೈಯ್ಯುವ ಹುಡುಗಾಟದ ಕೆಲಸವನ್ನು ಮಾಡದೆ ಪ್ರಮಾಣಕ್ಕೆ ತಯಾರಾಗಿ ಬರುವಂತೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೆಸರು ಉಲ್ಲೇಖಿಸದೆ ಸವಾಲ್ ಹಾಕಿದರು.

ಈ ಸಂಧರ್ಭದಲ್ಲಿ ಪೂಜಾರದಿಂಬ ಗ್ರಾಮಸ್ಥರು ಶಾಸಕರಾದ ಹರತಾಳು ಹಾಲಪ್ಪರವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷರಾದ ದಿವಾಕರ ಮುಖಂಡರಾದ ಎ ಟಿ ನಾಗರತ್ನಮ್ಮ, ಮೆಣಸೆ ಆನಂದ, ಯೋಗೇಂದ್ರಗೌಡ
ನೇಮಾಕ್ಷ ಗೌಡ, ರಾಘವೇಂದ್ರ, ಗಂಟೆ ರಾಜೇಂದ್ರ, ಕೃಷ್ಣಮೂರ್ತಿ ಗೌಡ, ತೀರ್ಥೇಶ, ಕೀರ್ತಿ ಕೆ ಗೌಡ ಹಾಗೂ ಇನ್ನಿತರರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

11 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

18 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago