ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ ಅನ್ಯಕೋಮಿನ ಯುವಕರ ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು ಕೆಲ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದರು.
ಲಷ್ಕರ್ ಮೊಹಲ್ಲಾದಲ್ಲಿ ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಂತರ ಬಾಪೂಜಿ ನಗರ ಕಾಲೇಜಿನಲ್ಲಿ ಹಿಜಬ್ ಬೆಂಬಲಿಸಿದ ಯುವಕರನ್ನ ಕೊಠಡಿಯಲ್ಲಿ ಕೂರಿಸಲಾಗಿದ್ದು ನಂತರ ಬಿಡುಗಡೆ ಮಾಡಲಾಯಿತು.
ಈ ವೇಳೆ ನಾರೇ ತಕಬ್ಈರ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಲಾಯಿತು. ನಂತರ ವಿದ್ಯಾರ್ಥಿನಿಯರನ್ನು ಸುರಕ್ಷಿತವಾಗಿ ಕಾಲೇಜಿನಿಂದ ಕಳುಹಿಸಲಾಯಿತು. ಈ ವೇಳೆ ಜಾವಿದ್ ಖಾನ್ ಅವರ ಬೈಕ್ ಹಾನಿಗೊಳಿಸಲಾಗಿದೆ.
ಇದೇ ವೇಳೆ ಮಾತನಾಡಿದ ತಹಶೀಲ್ದಾರ್ ಡಾ.ನಾಗರಾಜ್ ಎನ್.ಎನ್ ಜೆ ಇಂದು ಮತ್ತು ನಾಳೆ ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಈ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದರು.
ಮಾಹಿತಿ : @ಸುದ್ದಿಲೈವ್