ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿಯಾಗಬೇಕು : ಸುಂದರೇಶ್ ಆಗ್ರಹ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಶವದ ಮೆರವಣಿಗೆ ದಿನ ನಡೆದ ಗಲಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಎ 1 ಆರೋಪಿ ಮಾಡಿ ಅವರ ಪ್ರಕರಣದ ಕೇಸ್​ ದಾಖಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ​ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರ್ಷ ಕೊಲೆ ಬಳಿಕ ನಡೆದ ಗಲಭೆಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಹೊಣೆ. ಹಾಗಾಗಿ ಅವರನ್ನು ಪ್ರಕರಣದ ಆರೋಪಿ ನಂಬರ್ 1 ಮಾಡಬೇಕು. ಅಲ್ಲದೆ ಇಡೀ ಗಲಭೆಯಿಂದಾಗಿ ಆಗಿರುವ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿ ಹಾನಿ ಮತ್ತು ಗಾಯಾಳುಗಳ ಚಿಕಿತ್ಸಾ ಮತ್ತು ಪರಿಹಾರ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಅವರದೇ ಬಿಜೆಪಿ ಸರ್ಕಾರ ಸಿಎಎ-ಎನ್ ಆರ್ ಸಿ ಪ್ರತಿಭಟನಾಕಾರರ ಮೇಲೆ ಇದೇ ರೀತಿಯ ಕಾನೂನು ಪ್ರಯೋಗಿಸಿದೆ. ಅದೇ ಮಾನದಂಡ ಇಲ್ಲಿಯೂ ಅನ್ವಯವಾಗಬೇಕಲ್ಲವೇ? ಎಂದು ಪ್ರಶ್ನಿಸಿದ ಅವರು, ಸಚಿವರೊಂದಿಗೆ ಅಂದು ಶವಯಾತ್ರೆಯಲ್ಲಿ ಭಾಗವಹಿಸಿ ಗಲಭೆಗೆ ಕುಮ್ಮಕ್ಕು ನೀಡಿದ ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ಶಿವಮೊಗ್ಗ ಜಿಲ್ಲಾಡಳಿತ ಮತ್ತು ಪೊಲೀಸರು ಈ ಕ್ರಮ ಜರುಗಿಸದೇ ಹೋದರೆ, ಮಾರ್ಚ್ ಮೊದಲ ವಾರ ಜಿಲ್ಲಾ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರ ನೇತೃತ್ವದಲ್ಲಿ ಬಾರೀ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಹರ್ಷನ ಶವದ ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಹಾಗೂ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರುಗಳೇ ನೇತೃತ್ವ ವಹಿಸಿದ್ದರು. ಅವರ ಪ್ರಚೋದನಕಾರಿ ಹೇಳಿಕೆಗಳು ಮತ್ತು ಕುಮ್ಮಕ್ಕಿನಿಂದಲೇ ಗಲಭೆ ನಡೆದಿದೆ. ಹಾಗಿದ್ದರೂ ಪೊಲೀಸರು
ಈವರೆಗೆ ಆ ಯಾರ ಮೇಲೂ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆಯ ಬಗ್ಗೆಯಾಗಲೀ, ಗಲಭೆಗೆ ಕುಮ್ಮಕ್ಕು ನೀಡಿದ ಬಗ್ಗೆಯಾಗಲಿ ಪ್ರಕರಣ ದಾಖಲಿಸಿಲ್ಲ ಏಕೆ ಎಂದು ಸುಂದರೇಶ್ ಪ್ರಶ್ನಿಸಿದರು.

ಹಾಗೇ, “ಹರ್ಷನ ಕೊಲೆ ವೈಯಕ್ತಿಕ ವಿಚಾರವಾಗಿ ನಡೆದಿದೆ. ‌ಹರ್ಷ ಬದುಕಿದ್ದಾಗ, ಆತ ಕೆಲಸಕ್ಕಾಗಿ, ಜೀವನೋಪಾಯಕ್ಕಾಗಿ ಪರದಾಡುತ್ತಿದ್ದಾಗ, ವೈಯಕ್ತಿಕ ಸಂಘರ್ಷದಿಂದ ಜೈಲು ವಾಸ ಅನುಭವಿಸಿದಾಗ, ಹೀಗೆ ಯಾವ ಸಂದರ್ಭದಲ್ಲೂ ಬಿಜೆಪಿಯವರು ಕನಿಷ್ಠ ಒಂದು ಸಣ್ಣ ಸಹಾಯವನ್ನು ಮಾಡಿಲ್ಲ.ಕೊರೋನಾ ಸಂದರ್ಭದಲ್ಲಿ ಆತ ಮಹಾನಗರ ಪಾಲಿಕೆಯ ಸ್ಯಾನಿಟೈಜೇಷನ್ ಸೂಪರ್​ ವೈಸರ್ ಕೆಲಸಕ್ಕೆ ಅರ್ಜಿ ಹಾಕಿದ್ದರೂ ಬಿಜೆಪಿಯವರೇ ಆತನಿಗೆ ಅವಕಾಶ ತಪ್ಪಿಸಿದ್ದರು” ಎಂದೂ ಅವರು ಗಂಭೀರ ಅರೋಪ ಮಾಡಿದ್ದಾರೆ.

ಹರ್ಷ ಬದುಕಿದ್ದಾಗ ಆತನಿಗೆ ಒಳ್ಳೆಯ ಬದುಕು ನೀಡದೆ, ಅವನ ಅವಕಾಶ ಕಿತ್ತುಕೊಂಡ ಬಿಜೆಪಿಯವರು ಈಗ ತಮ್ಮ ಲಾಭಕ್ಕಾಗಿ ಹರ್ಷ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ. ಉತ್ತರಪ್ರದೇಶದ ಚುನಾವಣೆ ಪ್ರಚಾರದಲ್ಲೂ ಪ್ರಧಾನಮಂತ್ರಿ ಮೋದಿ ಅವರು ಹರ್ಷನ ವಿಚಾರವನ್ನು ಪ್ರಸ್ತಾಪ ಮಾಡಿ ರಾಜಕೀಯ ಮಾಡಿರುವುದು ದುರಂತ ಎಂದು ಸುಂದರೇಶ್ ಟೀಕಿಸಿದ್ದಾರೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

8 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

9 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

10 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago