ಸಾಗರ :ಕರ್ನಾಟಕದಲ್ಲಿ ಇದೀಗ ಕೇಸರಿ ಶಾಲು ಹಾಗೂ ಹಿಜಾಬ್ ನ ವಿಚಾರವಾಗಿ ಸಂಘರ್ಷ ನಡೆಯುತ್ತಿದೆ.ಉಡುಪಿ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ಸಂಘರ್ಷ ಇದೀಗ ರಾಜ್ಯಾದ್ಯಂತ ಪ್ರಾರಂಭವಾಗಿದೆ.
ಇದೀಗ ಇದರ ಸಂಘರ್ಷ ಮಲೆನಾಡಿಗೂ ಕಾಲಿಟ್ಟಿದ್ದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದರು.ಇವರನ್ನು ತಡೆಯಲು ಪ್ರಿನ್ಸಿಪಾಲ್ ಪ್ರಯತ್ನಪಟ್ಟರು ಯಶಸ್ವಿ ಕಾಣಲಾಗುತ್ತಿಲ್ಲ.
ಸಾಗರದ ಜ್ಯೂನಿಯರ್ ಕಾಲೇಜಿನ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಜಾಬ್ ಹಾಗೂ ಬುರ್ಖಾವನ್ನು ನೀವು ತೆಗೆಸಿದರೆ ನಾವು ಕೂಡ ಕೇಸರಿ ಶಾಲನ್ನು ತೆಗೆಯುತ್ತೇವೆ ಇಲ್ಲವಾದರೆ ನಾವು ಶಾಲು ಧರಿಸಿಕೊಂಡೇ ಕಾಲೇಜಿನ ಕೊಠಡಿಗೆ ಬರುತ್ತೇವೆಂದು ವಾದವಿವಾದಕ್ಕೆ ಇಳಿದಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಇದೀಗ ಕೇಸರಿ ಶಾಲನ್ನು ಧರಿಸಿಕೊಂಡು ಬಂದಿದ್ದು ಕಾಲೇಜಿನ ಮುಂದೆ ಹೈಡ್ರಾಮಾವೇ ನಡೆಯುತ್ತಿದೆ.
ಪೊಲೀಸರು ಹಾಗೂ ಶಾಲಾಡಳಿತ ಮಂಡಳಿ ಎಷ್ಟೇ ಪ್ರಯತ್ನಪಟ್ಟರೂ ವಿದ್ಯಾರ್ಥಿಗಳು ಹಿಜಾಬ್ ಹಾಗೂ ಬುರ್ಖಾ ತೆಗೆಯುವವರೆಗೂ ನಾವು ಕೇಸರಿ ಶಾಲು ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇👇👇
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್