ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!

ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ ನುಂಗಲಾರದ ತುತ್ತಾಗಿದೆ.

ಸಿಗರೇಟ್ ಹಾಗೂ ತಂಬಾಕು ಬೆಲೆ ಹೆಚ್ಚಾಗುವುದು ಎಂದು ಮಾರುಕಟ್ಟೆಯಲ್ಲಿ ಕಾಲ್ಪನಿಕ ಕೊರತೆ ಸೃಷ್ಟಿಸಿದ್ದ ಸಣ್ಣ ಅಂಗಡಿಗಳಿಂದ ಹಿಡಿದು ದೊಡ್ಡ ದಾಸ್ತಾನುಕಾರರು ಈಗ ಅ…ಡು ಸುಟ್ಟ ಬೆಕ್ಕಿನಂತಾಗಿದ್ದಾರೆ.

ಕೇಂದ್ರ ಸರ್ಕಾರ ಸತತ 2ನೇ ವರ್ಷ ತಂಬಾಕು ಉತ್ಪನ್ನಗಳು ಹಾಗೂ ಸಿಗರೇಟ್ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದು ಮುಂದಿನ ಆರ್ಥಿಕ ವರ್ಷದಲ್ಲಿ ಸಿಗರೇಟ್ ಮಾರಾಟದ ಪ್ರಮಾಣದಲ್ಲಿ ಸಾಧಾರಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ ಸಮಯದಲ್ಲಿ ಉಂಟಾದ ಅಡ್ಡಿಯಿಂದ ತಂಬಾಕು ಹಾಗೂ ಸಿಗರೇಟ್ ಉದ್ಯಮ ಇನ್ನಷ್ಟೇ ಚೇತರಿಸಿಕೊಳ್ಳಬೇಕಿದೆ. ಇದರ ನಡುವೆ ಈ ಎರಡೂ ಉತ್ಪನ್ನಗಳ ಮೇಲೆ ಸರ್ಕಾರವು ತೆರಿಗೆ ವಿಚಾರದಲ್ಲಿ ಸ್ಥಿರವಾಗಿರುವುದು ಇನ್ನಷ್ಟು ಸಹಾಯ ಮಾಡಲಿದೆ ಎಂದು ಐಸಿಐಸಿಐ ಡೈರೆಕ್ಟ್ ನ ವಿಶ್ಲೇಷಕ ಸಂಜಯ್ ಮನ್ಯಾಲ್ ತಿಳಿಸಿದ್ದಾರೆ.

2022-23ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಗಳನ್ನು ಮುಟ್ಟದೆ ಬಿಟ್ಟಿದ್ದರಿಂದ ಮಂಗಳವಾರ ಐಟಿಸಿ (ITC) ಷೇರುಗಳಲ್ಲಿ ಏರಿಕೆ ಕಂಡಿದೆ. ಐಟಿಸಿ ಕಂಪನಿಯ ಆದಾಯದಲ್ಲಿ ಶೇ. 40ರಷ್ಟು ಪಾಲು ಸಿಗರೇಟ್ ಆದಾಯದಿಂದಲೇ ಬರುತ್ತದೆ. ಪ್ರತಿ ಬಾರಿಯೂ ಬಜೆಟ್ ಸಂದರ್ಭದಲ್ಲಿ ತೆರಿಗೆಗಳು ಏರಿಕೆಯಾಗುವ ಭಯದಲ್ಲಿ ಐಟಿಸಿ ಷೇರು ಎಚ್ಚರಿಕೆಯಲ್ಲಿಯೇ ಇರುತ್ತದೆ. ಆದರೆ, ನಿರ್ಮಲಾ ಸೀತಾರಾಮನ್ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದ ಕಾರಣ, ಐಟಿಸಿ ಪಾಲಿಗೆ ಇದು ಧನಾತ್ಮಕ ವಿಚಾರ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಐಟಿಸಿ ಕಂಪನಿಯು ಫೆಬ್ರವರಿ 3 ರಂದು ಡಿಸೆಂಬರ್ 2021 ಕ್ಕೆ ಕೊನೆಗೊಂಡ ತ್ರೈಮಾಸಿಕಕ್ಕೆ ತನ್ನ ಹಣಕಾಸಿನ ಫಲಿತಾಂಶಗಳನ್ನು ಬಿಡುಗಡೆ ಮಾಡುತ್ತದೆ. ಮಾರ್ಚ್ 2022 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷಕ್ಕೆ ಮಧ್ಯಂತರ ಲಾಭಾಂಶದ ಘೋಷಣೆಯನ್ನು ಸಹ ಪರಿಗಣಿಸಲಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

12 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

12 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

16 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

18 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

19 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago