w
Headlines
Home » ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ. 

ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್‍ರವರಿಗೆ ದೂರು ನೀಡುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.