Headlines

ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :

ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ  ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಸ್ ಡಿಪಿಐ, ಪಿಎಫ್ ಐ ಮತ್ತು ಪಿಎಫ್ ಐ ಗೂಂಡಾಗಳು ಹಲ್ಲೆ, ಕೊಲೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತಾರೆ .ಇದರ ಮುಂದುವರೆದ ಭಾಗವಾಗಿ ನಿನ್ನೆ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತರನ್ನು ಅಮಾನುಷವಾಗಿ ಭೀಕರವಾಗಿ ಕೊಲೆ ಮಾಡಿತ್ತು ಇದರಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಎಲ್ಲಾ ಪ್ರಯತ್ನಗಳನ್ನು ಮೇಲ್ಕಂಡ ಸಂಘಟನೆಗಳು ಮಾಡುತ್ತಿದ್ದು ಕೂಡಲೇ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಹಾಗೂ ಎಸ್ ಡಿಪಿಐ ಪಿಎಫ್ ಐ ಮತ್ತು ಪಿಎಫ್ ಐ ಸಂಘಟನೆಯನ್ನು ನಿಷೇಧಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತೆ ಅಗ್ರಹಿಸಲಾಯಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸಿದಲ್ಲಿ ಮುಂದೆ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಇನ್ನಿತರ ಹಿಂದೂ ಸಂಘಟನೆಗಳು ಉಗ್ರವಾದ ಹೋರಾಟವನ್ನು ಮಾಡುವುದು ಅನಿವಾರ್ಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಈ ಸಂಧರ್ಭದಲ್ಲಿ ಬಜರಂಗದಳ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ದೇವರಾಜ್ ,ಕಾರ್ಯದರ್ಶಿ ರಾಘವೇಂದ್ರ,ಸಹ ಕಾರ್ಯದರ್ಶಿ ಮಂಜು ಸಿಂಗ್,ರಂಜನ್ ಕುಮಾರ್ , ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್,ಸುಂದರೇಶ್, ಮುಖಂಡರಾದ ಬೆಳ್ಳೂರು ತಿಮ್ಮಪ್ಪ, ಜಂಬಳ್ಳಿ ಗಿರೀಶ್,ಕೃಷ್ಣೋಜಿರಾವ್,
ಕಾರ್ತಿಕ್ ,ಅರ್ಜುನ್ ಹಾಗೂ ಇನ್ನಿತರರಿದ್ದರು..

Leave a Reply

Your email address will not be published. Required fields are marked *