ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ ಪ್ರತ್ಯೇಕತಾವಾದವನ್ನು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಕರಣದ ಹಿಂದೆ ದೇಶದ್ರೋಹಿ ಸಂಘಟನೆಗಳಾದ ಪಿಎಫ್ಐ ಮತ್ತು ಎಸ್.ಡಿ.ಪಿ.ಐ. ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಸಿಎಫ್ಐ(ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಎಂಬ ಮುಸ್ಲಿಂ ಮೂಲಭೂತವಾದಿ ವಿದ್ಯಾರ್ಥಿ ಸಂಘಟನೆ ಉಡುಪಿ ಮತ್ತು ಮಣಿಪಾಲದ ರಹಸ್ಯ ಸ್ಥಳದಲ್ಲಿ ಹಿಜಾಬ್ ಧರಿಸಲು ಅನುಮತಿ ಕೇಳಬೇಕು ಮತ್ತು ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸಲು ಯುವತಿಯರಿಗೆ ತರಬೇತಿ ನೀಡಿದ್ದಾರೆ ಎಂದು ದೂರಿದರು.ಅಲ್ಲದೆ ಇದರ ಹಿಂದೆ ಪಾಕಿಸ್ತಾನ, ಅಫಘಾನಿಸ್ಥಾನ, ತಾಲಿಬಾನಿ ಮಾನಸಿಕತೆಯ ಇಸ್ಲಾಂ ಮೂಲಭೂತವಾದಿಗಳು ಬೆಂಬಲ ಕೊಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಮುಸ್ಲಿಂ ದೇಶಗಳೆಂದೇ ಬಿಂಬಿತವಾಗಿರುವ ದೇಶಗಳಲ್ಲಿ ಹಿಜಾಬ್, ಬುರ್ಖಾ ಕಡ್ಡಾಯವಿಲ್ಲದಾಗ ಭಾರತದ ಹಿಜಾಬ್ ವಿಷಯವನ್ನ ದೊಡ್ಡದಾಗಿ ಬಿಂಬಿಸುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.ಹೈಕೋರ್ಟ್ ನೀಡಿದ ಮಧ್ಯಂತರ ತೀರ್ಪನ್ನು ಪಾಲಿಸದೆ, ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದು ಇವರ ಜಿಹಾದಿ ಮಾನಸಿಕತೆಯನ್ನು ತೋರಿಸುತ್ತಿದೆ. ನವೆಂಬರ್ ತಿಂಗಳಲ್ಲಿ ಹಿಜಾಬ್ ವಿವಾದ ಎಬ್ಬಿಸಿದ ಯುವತಿಯರು ಸಾಮಾಜಿಕ ಜಾಲತಾಣಗಳ ಮೂಲಕ ರಾಷ್ಟ್ರ ವಿರೋಧಿ ಸಂದೇಶ ಪೋಸ್ಟ್ ಮಾಡುವುದರೊಂದಿಗೆ ಸಿಎಫ್ಐ ಸಂಘಟನೆ ಮಾಡುವ ಎಲ್ಲ ಸಂದೇಶಗಳಿಗೆ ಮರು ಸಂದೇಶ ಮಾಡುವುದರ ಜತೆಗೆ, ಈ ಯುವತಿಯರು ಹಿಜಾಬ್ ಪ್ರಕರಣವನ್ನು ಈ ರೀತಿ ಬಿಂಬಿಸಲು ವ್ಯವಸ್ಥಿತ ಸಂಚು ಮಾಡಿರುವುದರ ಹಿಂದೆ ಅಂತಾರಾಷ್ಟ್ರೀಯ ಇಸ್ಲಾಂ ಮೂಲಭೂತ ಸಂಘಟನೆಗಳ ಕೈವಾಡವಿರುವ ಸಂಶಯ ದಟ್ಟವಾಗಿದೆ ಎಂದರು.

ಉಚ್ಛನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸದೇ ಕೇವಲ ವಿದ್ಯಾರ್ಥಿನಿಯರು ಅಲ್ಲದೆ, ಮುಸ್ಲಿಂ ಶಿಕ್ಷಕಿಯರು ಹಿಜಾಬ್ ಧರಿಸಿ ಬರುತ್ತಿದ್ದು, ಆ ಮೂಲಕ ಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ ಎಂದರು.ಈ ಹಿನ್ನಲೆಯಲ್ಲಿ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ರೂಪಿಸಲು ಹಾಗೂ ಕೋಮುಗಲಭೆ ಸೃಷ್ಟಿಸಿ ಇಡೀ ಕರ್ನಾಟಕವನ್ನ ಭಯಗ್ರಸ್ಥ ಮಾಡಿ ಶಾಂತಿ ಕದಡಲು ಹೊರಟಿರುವ ಸಂಚನ್ನು ವಿಫಲಗೊಳಿಸಬೇಕು, ಉಡುಪಿ ಕಾಲೇಜಿನಲ್ಲಿ ಹಿಜಾಬ್ ಪ್ರಕರಣವನ್ನು ಪ್ರಾರಂಭಿಸಿದ 6 ವಿದ್ಯಾರ್ಥಿನಿಯರನ್ನು ಮತ್ತು ಅವರಿಗೆ ಬೆಂಬಲವಾಗಿ ನಿಂತು ಸಂಚನ್ನು ರೂಪಿಸಿದವರ ವಿರುದ್ಧ ಎನ್ಐಎ(ರಾಷ್ಟ್ರೀಯ ತನಿಖಾ ದಳ) ಮುಖಾಂತರ ತನಿಖೆ ನಡೆಸಲು ಆದೇಶಿಸಬೇಕು ಮತ್ತು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಾಸುದೇವ್, ರಾಜೇಶ್ ಗೌಡ, ಸತೀಶ್, ನಾರಾಯಣ್ ವರ್ಣೇಕರ್, ಸುಧಾಕರ್ ಮತ್ತಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 hour ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

11 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

18 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

19 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

23 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

1 day ago