Headlines

ಹೊಂಬುಜ ಶ್ರೀಗಳಿಂದ ಮುಖ್ಯಮಂತ್ರಿ ಭೇಟಿ :

ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರವರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮನವಿ ಪತ್ರವನ್ನು ನೀಡಿದರು.

ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಿನ ವ್ಯಾಪ್ತಿಯಲ್ಲಿ ಜೈನ ಬಾಂಧವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೊಂಬುಜ ಅತಿಶಯ ಮಹಾಕ್ಷೇತ್ರ ಜಗನ್ಮಾತೆಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಭಕ್ತರಿಗೆ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ಸಮುದಾಯದ ಏಳಿಗೆಗೆ ಸ್ಪಂದಿಸುವಂತೆ ಈ ಭಾರಿಯ ಬಜೆಟ್‌ನಲ್ಲಿ ಆಧ್ಯತೆ ನೀಡುವಂತೆ ಮನವಿಯನ್ನು ಸಲ್ಲಿಸಿದರು.

ನಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಅಭಿನಂದಿಸಿ ಆಶೀರ್ವದಿಸಿದರು.

ಈ ಸಂಧರ್ಭದಲ್ಲಿ ರಾಜ್ಯದ ಗೃಹ ಸಚಿವರು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *