ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರವರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮನವಿ ಪತ್ರವನ್ನು ನೀಡಿದರು.
ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಿನ ವ್ಯಾಪ್ತಿಯಲ್ಲಿ ಜೈನ ಬಾಂಧವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೊಂಬುಜ ಅತಿಶಯ ಮಹಾಕ್ಷೇತ್ರ ಜಗನ್ಮಾತೆಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಭಕ್ತರಿಗೆ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ಸಮುದಾಯದ ಏಳಿಗೆಗೆ ಸ್ಪಂದಿಸುವಂತೆ ಈ ಭಾರಿಯ ಬಜೆಟ್‌ನಲ್ಲಿ ಆಧ್ಯತೆ ನೀಡುವಂತೆ ಮನವಿಯನ್ನು ಸಲ್ಲಿಸಿದರು.
ನಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಅಭಿನಂದಿಸಿ ಆಶೀರ್ವದಿಸಿದರು.
ಈ ಸಂಧರ್ಭದಲ್ಲಿ ರಾಜ್ಯದ ಗೃಹ ಸಚಿವರು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್