ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು.
ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ : ಫುಷ್ಪಾ ಜಾಧವ್