ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ. ಈ ಕೆರೆಯ ಸುತ್ತ ದೇವಸ್ಥಾನ, ಮಸೀದಿ, ಚರ್ಚ್ ಗಳಿದ್ದು, ಸರ್ವ ಜನಾಂಗದವರಿಗೆ  ಅನುಕೂಲಕರವಾಗುವಂತಹಾ ಕೆರೆಯಾಗಿದ್ದು, ಪಟ್ಟಣದ ಮಧ್ಯದಲ್ಲಿರುವ ಉತ್ತಮ ಒಟ್ಟೂರ ಕೆರೆಯಾಗಿದೆ. ಇದರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ಮತ್ತು ಪಟ್ಟಣದ ವಿವಿಧ ಜನರ ಧನಸಹಾಯದಿಂದ  ಹೂಳೆತ್ತುವ ಮೂಲಕ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಈ ಹಿಂದೆ ಭೀಟಿ ಕೆರೆಯ ಅಭಿವೃದ್ಧಿಗೆ ಸ.ರಾ ಸಂಸ್ಥೆಯು 12 ಲಕ್ಷ ರೂಪಾಯಿ ಮೌಲ್ಯದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಆ ಕೆರೆಯು ಈಗ ಉತ್ತಮ ಸ್ಥಿತಿಯಲ್ಲಿದ್ದು, ಸ.ರಾ ಸಂಸ್ಥೆಯಿಂದ ಈ ಕೆರೆಯೂ ಸೇರಿ ಒಟ್ಟು 12 ಕೆರೆಗಳ ಅಭಿವೃದ್ಧಿಯಾಗಿದೆ. ಆಗಿನ ಜಿಲ್ಲಾದಿಕಾರಿಯಾದ ದಯಾನಂದ್ ರವರು 3 ಗ್ರಾಮಗಳನ್ನು ದತ್ತು ಪಡೆದು ಅಲ್ಲಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು ತಿಳಿಸಿ ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡಲು ತಿಳಿದ್ದರು. ಅದರಂತೆಯೇ ಸಹರಾ ಸಂಸ್ಥೆಯು 3 ಗ್ರಾಮಗಳನ್ನು ದತ್ತು ಪಡೆದು ಕೆರೆಗಳ ಹೂಳೆತ್ತುವುದರ ಮೂಲಕ ಅಭಿವೃದ್ಧಿ ಪಡಿಸಿದ್ದಾರೆ ಎಂದರು.


ಮಾನವರಾದ ನಾವುಗಳು ಸಂಸ್ಕ್ರತದಲ್ಲಿ ತಿಳಿಸಿದಂತೆ  “ಅನ್ಯ ಕ್ಷೇತ್ರಂ, ಕೃತಂ ಪಾಪಂ, ಪುಣ್ಯ ಕ್ಷೇತ್ರೇ, ವಿನಶ್ಯತಿ,  ಪುಣ್ಯ ಕ್ಷೇತ್ರೇ ಕೃತಂ ಪಾಪಂ, ವಜ್ರ ಲೇಪೆ ಭವಿಷ್ಯತೀ” ಎಂಬಂತೆ ಅನ್ಯ ಕ್ಷೇತ್ರದಲ್ಲಿ ಮಾಡಿರುವಂತಹ ಪಾಪಗಳನ್ನ  ಪುಣ್ಯ ಕ್ಷೇತ್ರಗಳಲ್ಲಿ ಕಳೆದುಕೊಳ್ಳಬೇಕು, ಹಾಗೇ ಪುಣ್ಯ ಕ್ಷೇತ್ರದಲ್ಲಿ ಮಾಡಿದ ಪಾಪವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ.ಹಾಗೇನಾದರೂ ಪುಣ್ಯ ಕ್ಷೇತ್ರದಲ್ಲಿ ಮಾಡಿದ ಪಾಪವನ್ನು ಕಳೆದು ಕೊಳ್ಳಬೇಕೆಂದರೆ ಕೆರೆಗಳನ್ನು  ಕಟ್ಟುವುದರ ಮೂಲಕ ಅಥವಾ ಅದಕ್ಕೆ ಧನ‌ಸಹಾಯ ಮಾಡುವುದರ ಮೂಲಕ ಪಾಪಗಳನ್ನು ಕಳೆದುಕೊಳ್ಳ ಬಹುದು ಎಂದರು.

ಹಿಂದಿನ‌ ಕಾಲದಲ್ಲಿ ವೈಶ್ಯಯರು ಸೇರಿದಂತೆ ಅನೇಕರು ತಾವು ಮಾಡಿದ ಪಾಪಗಳನ್ನು ಕಳೆದುಕೊಳ್ಳಲು ಕೆರೆಯನ್ನು ಕಟ್ಟಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಉದಾಹರಣೆಯಾಗಿ ಚನ್ನಗಿರಿ ಬಳಿ ಇರುವ ಸೂಳೆ ಕೆರೆಯೂ ಮುಖ್ಯ ಉದಾಹರಣೆಯಾಗಿದೆ,

ವೇಶ್ಯೆಯರು ಇಡೀ ದೇಶದಲ್ಲಿ 41 ಸಾವಿರ ಕೆರೆಗಳನ್ನು ಅವರ ಪಾಪಗಳನ್ನು ಕಳೆದುಕೊಳ್ಳಲು ಕಟ್ಟಿಸಿದ್ದಾರೆ ಇದು ಇತಿಹಾಸ ಪ್ರಸಿದ್ದವಾಗಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕಿ ಗೀತಾ ಮಾತನಾಡಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ ಹಲವೆಡೆ ಗ್ರಾಮಗಳ ಅಭಿವೃದ್ಧಿ ಪಡಿಸುವ ಸದುದ್ದೇಶದಿಂದ ಅಲ್ಲಿಯ ಕೆರೆಗಳ ಹೂಳೆತ್ತುವ ಮೂಲಕ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೇವಲ ಕೆರೆಗಳನ್ನು ಅಭಿವೃದ್ಧಿ ಪಡಿಸುವುದಲ್ಲದೇ, ಮಹಿಳೆಯರ ಮೂಲಕ  ಸ್ವ ಸಹಾಯ ಸಂಘಗಳ ರಚನೆ ಮಾಡಿ ಅತ್ಯಂತ ಕಡು ಬಡವರಿಗೆ ಧನ ಸಹಾಯ ಮಾಡುವುದಲ್ಲದೇ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ “ಕ್ಲೋ ರೈಡ್ ಯುಕ್ತ” ನೀರುಗಳಿದ್ದರೆ ಅದನ್ನು ಶುದ್ಧೀಕರಿಸುವುದರ ಮೂಲಕ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೇ ಜ್ಞಾನ ವಿಕಾಸ ಯೋಜನೆ ಜಾರಿಗೆ ತಂದು ಅನೇಕರಿಗೆ ಸ್ವಾಲಂಬಿ ಬದುಕನ್ನು ಕಟ್ಟಿಕೊಡುತ್ತಿದೆ ಹೀಗೆ ರಾಜ್ಯಾದ್ಯಂತ ಅನೇಕ ರೀತಿಯಾ ಬೇರೆ ಬೇರೆ ಯೋಜನೆಗಳನ್ನು ಜಾರಿಗೆ ತಂದು ಜನತೆಗೆ ಸಹಾಯ ಹಸ್ತ ನೀಡುತ್ತಿದೆ ಎಂದು ತಿಳಿಸಿದರು.

ಒಟ್ಟೂರು ಕೆರೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಪುರ ಪಂಚಾಯಿತಿ ಸದಸ್ಯ ಅಶ್ವಿನಿ ಕುಮಾರ್ ಮಾತನಾಡಿ ಪಟ್ಟಣದ ಮಧ್ಯ ಭಾಗದಲ್ಲಿ ನಿರ್ಮಿಸಿರುವ ಒಟ್ಟೂರ ಕೆರೆಯು ಇತಿಹಾಸ ಪ್ರಸಿದ್ಧವಾಗಿರುವ ಕೆರೆಯಾಗಿದೆ. ಈ ಕೆರೆಯ ಮೂಲ ಹೆಸರು ಒಟ್ಟೂರ ಕೆರೆ ಎಂದೇ ಸುಪ್ರಸಿದ್ಧವಾಗಿದ್ದು, ಇತ್ತೀಚಿನ ದಿನಗಳಲ್ಲಿ ಅನೇಕರ ನಿರ್ಲಕ್ಷ್ಯ ದಿಂದ “ಹೊಟ್ಟು ಕೆರೆ ” ಎಂದು ಕರೆಯಲಾಗುತ್ತಿದೆ.

ಈ ಕೆರೆಯ ಜೀರ್ಣೋದ್ಧಾರಕ್ಕಾಗಿ ಹಲವು ವರ್ಷಗಳಿಂದ ಸ.ರಾ ಸಂಸ್ಥೆಯ ಮುಖ್ಯಸ್ಥರಾದ  ಏಸು ಪ್ರಕಾಶ್ ಮತ್ತು ಧನುಷ್ ಸೇರಿದಂತೆ ಅನೇಕರ ಬಳಿ ಈ ಕೆರೆಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿತ್ತು, ಆಗ ಈ ಕೆರೆಯ ಹೂಳೆತ್ತುವುದು ಮತ್ತು ಸುತ್ತ ಜನರು ಓಡಾಡುವಂತೆ ಅಭಿವೃದ್ಧಿ ಪಡಿಸಲು ಚಿಂತನೆ ನಡೆದಿತ್ತು. ಈಗ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ,ರಾ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಮತ್ತು ಊರಿನ ಜನತೆಯಿಂದ ಸಹಕಾರ ಪಡೆದು ಈ ಕೆರೆಯ ಅಭಿವೃದ್ಧಿಗೆ ಕೈ ಜೋಡಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ 5 ಲಕ್ಷ ರೂಪಾಯಿ ನೆರವು ಮತ್ತು ಸ,ರಾ ಸಂಸ್ಥೆ ಮತ್ತು ಪಟ್ಟಣದ ಅನೇಕರ ಸಹಾಯದೊಂದಿಗೆ ಸುಮಾರು 5 ಲಕ್ಷ ರೂಪಾಯಿ ಗಳನ್ನು ಒಗ್ಗೂಡಿಸಿ ಈ ಕೆರೆಯ ಅಭಿವೃದ್ಧಿ ಪಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದ ಅವರು, ಒಂದು ಕೆರೆಯನ್ನು ಕಟ್ಟಿಸಿದರೆ 400 ದೇವಾಲಯಗಳನ್ನು ಕಟ್ಟಿಸಿದ ಪುಣ್ಯ ಲಭಿಸುವುದು ಎಂಬಂತೆ ಒಟ್ಟೂರ ಕೆರೆಯನ್ನು ಕಟ್ಟಿಸಲು ಸಹಾಯ ಹಸ್ತ ನೀಡಿದವರಿಗೆ ಪುಣ್ಯ ಲಭಿಸುವುದು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಹೊಸನಗರದ  ಮಸೀದಿಯ ಮುಖ್ಯ ಗುರುಗಳಾದ  ಬದ್ರುದ್ದಿನಿ ಸಖಾಫಿ,ಶಾದಾಫ್ ಮಹಮ್ಮದಿಯ ಎ ಮಸ್ದೀದ್, ಸಂತ ಅಂತೋನಿ ದೇವಾಲಯ ಹೊಸನಗರದ ಫಾಧರ್ ಜಾನ್ಸನ್ ಡಿಮೇಲ್ಲೋ ರವರು ಮುಖ್ಯ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಪುರ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಬೇಬಿ, ಇಂಜಿನಿಯರ್ ಗಣಪತಿ, ಸೂಪರ್ ವೈಸರ್ ರಮೇಶ್, ಈ.ಇ.ಓ ಪ್ರವೀಣ್ ಕುಮಾರ್,ಜೆಸಿಐ ಹೊಸನಗರ ಕೊಡಚಾದ್ರಿ, ಅಧ್ಯಕ್ಷರು, ಸೀಮಾ ಕಿರಣ್. ನೋರಾ ಮೆಟಲ್ಡಾ,ನಾಸಿರ್
ಮತ್ತು ಚೇತನ್ ದಾಸ್ ಹೊಸಮನೆ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ :- ಪುಷ್ಪಾ ಜಾಧವ್.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

10 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

18 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago