ಹೊಸನಗರ : ಇದೇ ತಿಂಗಳ 26-27 ರಂದು ಬಳ್ಳಾರಿಯಲ್ಲಿ ಜೆಸಿಐ ಸಂಸ್ಥೆಯಿಂದ ರಾಜ್ಯದಲ್ಲಿನ ಜೆಸಿಐ ನ ಎಲ್ಲಾ ಅಧ್ಯಕ್ಷ ಸದಸ್ಯರಿಗೆ 24 ಜೋನ್ ಪ್ರೆಸಿಡೆಂಟ್ ಜೆಸಿ ದೀಪಿಕಾ ಎನ್ ಬಿದಿರಿ ಮತ್ತು 24 ಜೋನ್ ಡೈರೆಕ್ಟರ್ ಮ್ಯಾನೆಜ್ ಮೆಂಟ್ ಜೆಸಿ ಅನುಷ್ ಗೌಡ ಇವರುಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಯಿತು.
ಹೊಸನಗರ ತಾಲ್ಲೂಕಿನಲ್ಲಿ ಮೊದಲ ಮಹಿಳಾ ಅಧ್ಯಕ್ಷರಾಗಿ ಕೇವಲ 1 ತಿಂಗಳಿನಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿ ಉತ್ತಮ ಸಮಾಜ ಸೇವೆಯನ್ನು ಮಾಡಿದ್ದಕ್ಕೆ ಅಧ್ಯಕ್ಷೆ ಸೀಮಾ ಕಿರಣ್ ತೆಂಡ್ಯೂಲ್ಕರ್ ರವರಿಗೆ ಎಲ್.ಓ.ಎಂ ನಲ್ಲಿ 4 ಬೆಸ್ಟ್ ಫರ್ಫಾರ್ಮೆನ್ಸ್ ಅವಾರ್ಡ್ ದೊರಕಿದೆ.
ಇವರಿಗೆ ಜೆಸಿಐ ಹೊಸನಗರ ಕೊಡಚಾದ್ರಿ ಸರ್ವ ಸದಸ್ಯರು ಹಾಗೂ ಸ್ನೇಹಿತರು ಶುಭ ಹಾರೈಸಿದ್ದಾರೆ.
ಬಳ್ಳಾರಿಯ ಎಲ್.ಓ.ಎಂ ನಲ್ಲಿ ನಡೆದ ಕಾರ್ಯಮಕ್ಕೆ ಹೊಸನಗರದಿಂದ ಜೆಸಿ ಜ್ಯೋತಿ ಪುರ್ಣೇಶ್, ಜೆಸಿ ಶೈಲಾ ಕೇಶವ, ಜೆಸಿ ಅಜೇಯ್ ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್