ಹಿಜಾಬ್ ವಿವಾದ : ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಅರ್ಜಿ ವರ್ಗಾವಣೆ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಹಿಜಾಬ್ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ನೀಡಲು ಮಧ್ಯಂತರ ಆದೇಶಕ್ಕೆ ಅರ್ಜಿದಾರರು ಕೋರಿದ್ದರು. ಇದನ್ನು ನಿರಾಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು. ಇದಕ್ಕಾಗಿ ಮುಖ್ಯ…