w
Headlines
Home » ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ : ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು…!!!

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ : ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು…!!!

ಆನಂದಪುರ ಸಮೀಪದ ಹೊಸಗುಂದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತವಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಲಾರಿ (KA 05 AA 5068 ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಗುದ್ದಿದ ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಈ ಅಪಘಾತದಲ್ಲಿ ಲಾರಿ ಡ್ರೈವರ್ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.