w
Headlines
Home » ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆ : ದಿನಾಂಕ 16 ರ ಬುಧವಾರ,ಸಮಯ ಸಂಜೆ 3:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ನ ಕುವೆಂಪು ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕೆರೆಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆರೆಹಳ್ಳಿ ಹೋಬಳಿಯ ರಿಪ್ಪನ್ ಪೇಟೆ ,ಬಾಳೂರು ,ಹರತಾಳು,ಬೆಳ್ಳೂರು , ಕೆಂಚನಾಲ , ಅರಸಾಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಜಿ, ನಾಗರಾಜ್,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಾಕರ್ ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ ಕಾನುಗೋಡು ,ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಶರೀಫ್ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್, ಈಶ್ವರಪ್ಪ ಗೌಡ್ರು ಎಂ ಬಿ ಲಕ್ಷ್ಮಣಗೌಡ, ಚಂದ್ರೇಶ್, ಅಮೀರ್ ಹಂಝ, ರಾಜಣ್ಣ,ರಿಪ್ಪನ್ ಪೇಟೆ ಗ್ರಾಪಂ ಸದಸ್ಯರುಗಳಾದ ಮಧುಸೂದನ್, ಗಣಪತಿ,ಪ್ರಕಾಶ್ ಪಾಳೆಕಾರ್,ಧನಲಕ್ಷ್ಮೀ,ಸಾರಬಿ,
ವೇದವತಿಪರಮೇಶ್ , ನಿರೂಪಮರಾಕೇಶ್,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾದ ಉಲ್ಲಾಸ,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ,ಮತ್ತು ಮುಖಂಡರಾದ ರವೀಂದ್ರ ಕೆರೆಹಳ್ಳಿ,ಮಳವಳ್ಳಿ ಮಂಜುನಾಥ್ , ರಮೇಶ್ ಫ಼್ಯಾನ್ಸಿ ಹಾಗೂ ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಮಹಿಳಾ ಮುಖಂಡರು, ಗ್ರಾಮ ಪಂಚಾಯತ್ ಹಾಲಿ, ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು,ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಹಾಜರಾಗುವಂತೆ ತಿಳಿಸಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.