ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ.
ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ.
ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ ರೀತಿಯ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ