ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು.
ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ ಇಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ಕಲಾ ಹೋಮ ನವಕಪ್ರದಾನ ಕಳಸ ಕಲಶಾಭಿಷೇಕ ಆದಿವಾಸ ಹೋಮ ಪವಮಾನ ಅಭಿಷೇಕ ಆಶ್ಲೇಷ ಬಲಿ ಹಾಗೂ ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ತೀರ್ಥಪ್ರಸಾದ ವಿನಿಯೋಗ ಜರುಗಿತು.
ಈ ಸಂದರ್ಭದಲ್ಲಿ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾಪನೆಗೂ ಮೊದಲು ಇಲ್ಲಿ ಬರಿ ಹುತ್ತವೊಂದು ಇದ್ದು ಅಗಾಗ ಸುತ್ತಮುತ್ತಲಿನ ಜನರಿಗೆ ಕಾಣಿಸುತ್ತಿದ್ದ ನಾಗದರ್ಶನದಿಂದ ಭಯಭೀತರಾಗಿ ಹಲವು ಜೋತಿಷಿಗಳ ಬಳಿ ಅರೋಢ ಪ್ರೆಶ್ನೆಗಳನ್ನು ಕೇಳಿದಾಗ ಇದೊಂದು ಸುಕ್ಷೇತ್ರವಾಗಿ ರೂಪುಗೊಳ್ಳುವುದು ಎಂಬ ಭವಿಷ್ಯವಾಣಿ ಇಂದು ಅಪಾರ ಭಕ್ತರ ಕಷ್ಟಕಾರ್ಪಣ್ಯಗಳನ್ನು ಕರಗಿಸಿ ಭಕ್ತರ ಉದ್ದಾರಕರಾಗಿ ರಿಪ್ಪನ್‍ಪೇಟೆಯ ಸಾಗರ ರಸ್ತೆಯ ತಿಲಕ್ ನಗರದಲ್ಲಿ ಉದ್ಬವ ಮೂರ್ತಿಯಾಗಿ ಹುತ್ತದಲ್ಲಿ ನಲೆ ನಿಂತಿದ್ದಾಳೆಂದು ಹಿರಿಯರಾದ ಜಗನ್ನಾಥಶೆಟ್ಟರು.ಆರ್.ಟಿ.ಗೋಪಾಲ. ಬಿ.ಕೆ.ಹರೀಶ್.ಇನ್ನಿತರರು ಮಾಧ್ಯಮದವರ ಬಳಿ ತಾವುಗಳು ಕಂಡ ಸತ್ಯವನ್ನು ವಿವರಿಸಿದರು.
ಅರಂಭದಲ್ಲಿ ವಿಠಲಶೆಟ್ಟರು ನಾಲ್ಕೈದು ಜನರ ಜೊತೆಗೊಂಡಿ ವರ್ಷದಲ್ಲಿ ಒಮ್ಮೆ ತಮ್ಮ ಕುಟುಂಬದ ದೇವರೆಂದು ಜೋತಿಷಿಗಳ ಅಣತಿಯಂತೆ ಪೂಜೆ ಪುನಸ್ಕಾರಗಳನ್ನು ಅರಂಭಿಸಿ ವರ್ಷದಿಂದ ವರ್ಷಕ್ಕೆ ತಾಯಿ ರಕ್ತೇಶ್ವರಿ ಮತ್ತು ನಾಗದೇವರು ಹೆಸರಿನಲ್ಲಿ ಈ ಕ್ಷೇತ್ರದಲ್ಲಿ ನೆಲೆಸಿದು.ಕಳೆದ ಹತ್ತುವರ್ಷದಿಂದಿಚೆಯಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಾ ತನುಮನ ಧನದ ಸೇವಾ ಸಹಕಾರದೊಂದಿಗೆ ದೇವಸ್ಥಾನವೂ ಭವ್ಯವಾಗಿದ್ದು ಸುತ್ತಮುತ್ತಲಿನ ಅರಾಧ್ಯದೈವವಾಗಿ ನೆಲೆಸಿದೆ.
ಬೇಡಿ ಬರುವ ಭಕ್ತರ ಕಷ್ಟ ಕಾರ್ಪಣ್ಯ ನಿವಾರಣೆ;-
ಇಲ್ಲಿಗೆ ಬೇಡಿ ಬರುವ ಭಕ್ತರ ಕಷ್ಟವನ್ನು ಪರಿಹರಿಸುವ ಅಭೀಷ್ಟ ವರದಾಯಿಗೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಸಂಕಲ್ಪದಂತೆ ಗ್ರಾಮಸ್ಥರ ಮತ್ತು ದೇವಸ್ಥಾನ ಸೇವಾಸಮಿತಿಯವರ ಸಹಕಾರದಿಂದ ವಿಶೇಷ ಅಸಕ್ತಿವಹಿಸಿ ಜೀರ್ಣೋದ್ದಾರ ಕಾರ್ಯದಲ್ಲಿ ತೊಡಗಿಸಿಕೊಂಡು ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸುತ್ತಿದ್ದು ದೇವಸ್ಥಾನದ ಅಡಳಿತ ಮಂಡಳಿಯ ಅಧ್ಯಕ್ಷರಾಧಿಯಾಗಿ ಸಮಿತಿಯವರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲಿದೆ ಪ್ರಾಮಾಣಿಕವಾಗಿ ಶ್ರದ್ದಾಭಕ್ತಿಯಿಂದ ದೇವರ ಸೇವಾ ಕಾರ್ಯದಲ್ಲಿ ತೊಡಗಿರುವುದು ಇಲ್ಲಿನ ವಿಶೇಷತೆಯಾಗಿದೆ.
ದೇವಸ್ಥಾನದ ಮುಂಭಾಗದ ಭವ್ಯ ಕಟ್ಟಡದ ಅಭಿವೃದ್ದಿಗಾಗಿ ಈಗಾಗಲೇ ಸುತ್ತಮುತ್ತಲಿನ ಹಲವು ಭಕ್ತರು ದೇಣಿಗೆ ನೀಡಿರುವುದು ಮತ್ತು ಸರ್ಕಾರದಿಂದ ಸಹ ಅನುಧಾನ ಸಹ ಬಿಡುಗಡೆಯಾಗಿದೆ ಅದರಲ್ಲಿಯೇ ಅಚ್ಚುಕಟ್ಟಾಗಿ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ಭಕ್ತರ ಅಕರ್ಷಣೆಯ ಕೇಂದ್ರವನ್ನಾಗಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್