ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ.


ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಲಘು ವಾಹನಗಳು ತೀರ್ಥಹಳ್ಳಿ – ಕೊಪ್ಪ, ಶೃಂಗೇರಿ, ಮಾಳ, ಕಾರ್ಕಳ ಮೂಲಕ ಉಡುಪಿ ತಲುಪಬಹುದು. ಭಾರಿ ವಾಹನಗಳು ತೀರ್ಥಹಳ್ಳಿ, ಮಾಸಿಕಟ್ಟೆ, ಹೊಸಂಗಡಿ, ಸಿದ್ಧಾಪುರ, ಕುಂದಾಪುರ ಮೂಲಕ ಉಡುಪಿಗೆ ಈ ಪರ್ಯಾಯ ರಸ್ತೆ ಮಾರ್ಗದ ಮೂಲಕ ತೆರಳುವಂತೆ ಸೂಚಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

7 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

8 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

9 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago