POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65 ರ ಹರೆಯದ ವ್ಯಕ್ತಿ ಸಾವನ್ನಪ್ಪಿದ್ದು ಮೃತದೇಹವನ್ನು ಸಾಗರದ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ಕಾರಿನಲ್ಲಿದ್ದ ಇನ್ನುಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾಗರದ ಶ್ರಿ ಆಂಬುಲೆನ್ಸ್ ಮಾಲೀಕ ಗಂಗಾಧರ್ ಹಾಗೂ ಹೈವೇ ಪ್ಯಾಟ್ರೋಲ್ ಸಿಬ್ಬಂದಿಗಳು ಶವ ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

 ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತ ಸ್ಥಳದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.