ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು.
ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆ ಆರಂಭಗೊಂಡ ನಂತರ ಆನೆಗಳು ಕಾಣದಾಗಿವೆ ಎಂದವರು ನುಡಿದರು.

ಇಲ್ಲಿನ ಬಹುತೇಕ ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಾಗಿದ್ದು, ಅಂತಹ ರೈತರ ತೋಟಗಳೆ ಹಾನಿಗೊಳಗಾಗಿರುವುದು ನೋವಿನ ಸಂಗತಿ. ರೈತರು ಬೆಳೆದ ಪ್ರತಿಯೊಂದು ಅಡಿಕೆ ಮತ್ತಿತರ ಗಿಡಗಳ ಬೆಳವಣಿಗೆಯ ಹಿಂದಿನ ಶ್ರಮ ನಮಗೆ ಅರಿವಿದೆ. ಆದ್ದರಿಂದ ಸಂತ್ರಸ್ಥ ರೈತರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ಧನ ಬಿಡುಗಡೆ ಮಾಡುವಂತೆ ಹಾಗೂ ಪುನಃ ಆನೆಗಳ ಬರದಂತೆ ಕಂದಕ ನಿರ್ಮಿಸಲು ೨೯ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಕಂದಕ ನಿರ್ಮಾಣಕಾರ್ಯ ಆರಂಭಗೊಳ್ಳಲಿದೆ. ಇದರಿಂದಾಗಿ ಆನೆಗಳ ಹಾವಳಿಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದ ಅವರು, ಯಾವುದೇ ರೈತರು ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದವರು ನುಡಿದರು.

ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಈ ಪ್ರದೇಶಕ್ಕೆ ಬಂದಿರುವ ಸಂಭವವಿದೆ. ಈ ಸಂಬಂಧ ಸಾಮಾಜಿಕ ಮತ್ತು ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳಿಗೆ ಜಂಟಿಯಾಗಿ ಕಾರ್ಯಾಚರಣೆಗೆ ರೂಪುರೇಷೆಗಳನ್ನು ತಯಾರಿಸುವಂತೆ ಸೂಚಿಸಲಾಗಿದೆ ಎಂದ ಅವರು, ಅಲ್ಲದೇ ಕೀಗಡಿ ಮತ್ತು ರಿಪ್ಪನ್‌ಪೇಟೆ ಸಮೀಪದ ತಳಲೆಯಲ್ಲಿಯೂ ಸಾಕಷ್ಟು ಹಾನಿಯಾಗಿರುವ ಮಾಹಿತಿ ಲಭ್ಯವಾಗಿದೆ. ಅರಣ್ಯ ಇಲಾಖೆಯಲ್ಲಿನ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆಗಳನ್ನು ಹಿಂದಕ್ಕೆ ಕಳುಹಿಸುವ ಕಾರ್ಯ ನಡೆಸುವಂತೆಯೂ ಸೂಚಿಸಲಾಗಿದೆ ಎಂದರು.

ಇಲ್ಲಿನ ಅರಣ್ಯ ಪ್ರದೇಶ ಭೌಗೋಳಿಕವಾಗಿ ವಿಶಾಲ ವ್ಯಾಪ್ತಿಯನ್ನು ಹೊಂದಿದ್ದು, ಆನೆಗಳನ್ನು ಹುಡುಕುವುದು, ಅವುಗಳ ಇರುವನ್ನು ಗುರುತಿಸುವುದು ತಕ್ಷಣಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಅವರು, ಆನೆಗಳ ನಿಯಂತ್ರಣಕ್ಕೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದವರು ನುಡಿದರು.
ಮರಿಯಾನೆ ಮತ್ತು ಒಂದು ಹೆಣ್ಣಾನೆ ಇರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಫಸಲು ಬರುವ ಅಡಿಕೆ ಗಿಡಗಳ ಹಾನಿಗೆ ಸಂತ್ರಸ್ಥ ಬೆಳೆಗಾರರಿಗೆ ತಕ್ಷಣ ಪರಿಹಾರಧನ ವಿತರಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ದೊಡ್ಡ ಪ್ರಮಾಣದ ೧.೫ಕಿ.ಮೀ. ದೂರದ ಕಂದಕ ನಿರ್ಮಾಣ ಕಾರ್ಯಕ್ಕೂ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಅವರು ಮಾತನಾಡಿ, ಈಗಾಗಲೇ ಗುರುತಿಸಿದ ಆನೆಗಳನ್ನು ೧೫ದಿನಗಳ ಕಾರ್ಯಾಚರಣೆ ನಡೆಸಿ, ಹಿಮ್ಮೆಟ್ಟಿಸಲಾಗಿದೆ. ಹೊಸನಗರ ಸಮೀಪದ ತಳಲೆ ಗ್ರಾಮದ ಸುತ್ತಲ ಪ್ರದೇಶದಲ್ಲಿ ಆನೆಗಳು ಬೀಡು ಬಿಟ್ಟಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಅಲ್ಲಿಯೂ ಕಾರ್ಯಾಚರಣೆ ನಡೆಸಿ ಹಿಮ್ಮೆಟ್ಟಿಸಲಾಗುವುದು ಎಂದರು.
ಸುಮಾರು ೩೯೫ಚದರ ಕಿ.ಮೀ. ವಿಶಾಲ ವ್ಯಾಪ್ತಿಯನ್ನು ಹೊಂದಿದ್ದು, ಈ ಪ್ರದೇಶದಲ್ಲಿ ೧೩೦ಕ್ಕೂ ಹೆಚ್ಚಿನ ಗ್ರಾಮಗಳಲ್ಲಿ ಜನರು ವಾಸವಾಗಿದ್ದಾರೆ. ಶೆಟ್ಟಿಹಳ್ಳಿ, ಮಲೆಶಂಕರ, ಮಂಜರಿಕೊಪ್ಪ ಮುಂತಾದ ಅನೇಕ ಗ್ರಾಮಗಳು ಅರಣ್ಯದಲ್ಲಿಯೇ ಇವೆ. ಬೇಸಿಗೆಯಲ್ಲಿ ಈ ಅರಣ್ಯ ಪ್ರದೇಶದ ಉದುರೆಲೆ ಕಾಡಾಗಿರುವುದರಿಂದ ಆಹಾರ ಕೊರತೆಯನ್ನು ನೀಗಿಸಿಕೊಳ್ಳಲು ಅಡವಿಯಲ್ಲಿನ ಆನೆಗಳು ಆಹಾರವನ್ನರಸಿ, ಪ್ರದೇಶದಿಂದ ಪ್ರದೇಶಕ್ಕೆ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಜನವಸತಿ ಪ್ರದೇಶದಲ್ಲಿನ ಜನರ ಭಯದಿಂದ ಹಾಗೂ ಸಿಡಿಮದ್ದು ಸಿಡಿಸುವುದರಿಂದ ಆನೆಗಳು ಹೆದರಿರುವ ಸಂಭವವೂ ಇಲ್ಲದಿಲ್ಲ ಎಂದ ಅವರು ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಇಲಾಖೆ  ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.

ಆನೆಗಳ ಹಾವಳಿಯಿಂದ ಹಾನಿಗೊಳಗಾದ ಜಮೀನುಗಳ ೧೬ ರೈತರು ಪರಿಹಾರಧನ ನೀಡುವಂತೆ ಇಲಾಖೆಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಪರಿಹಾರಧನ ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಡಿ.ಎಫ್.ಓ. ಶಂಕರ್, ಅರಣ್ಯ ಸಂರಕ್ಷಣಾಧಿಕಾರಿಗಳಾದ ಟಿ.ವೈ.ಅಕ್ಷತಾ, ಆದರ್ಶ, ಪ್ರಕಾಶ್ ಸೇರಿದಂತೆ  ಸುತ್ತಮುತ್ತಲ ಗ್ರಾಮಸ್ಥರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ರೈತರು ಉಪಸ್ಥಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

9 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

9 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

11 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago