ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.

ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ ಡಾಕ್ಟರೇಟ್ ಪಡೆದ ವಿಜ್ಞಾನಿ  ಯು .ಆರ್ .ರಾವ್ ತನ್ನ ಯಶಸ್ಸಿಗೆ ಕಾರಣವಾದ ಕನ್ನಡದ ಪ್ರಾಥಮಿಕ  ಶಿಕ್ಷಣವನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದುದ್ದನ್ನು ನೆನಪಿಸಿದರು. ಈ ರೀತಿ ಅನೇಕ ಸಾಧನೆ ಮಾಡಿದ ಸಾಧಕರ ಪ್ರಾಥಮಿಕ ಶಿಕ್ಷಣ ಕನ್ನಡವೇ ಆಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಕೆ. ಇಲಿಯಾಸ್ ಮಾತನಾಡಿ ಕನ್ನಡದ ಉಳಿವು ನಮ್ಮೆಲ್ಲರ ಕೈಯಲ್ಲಿದೆ, ಅದನ್ನು ಮರೆಯದೆ ಕನ್ನಡಿಗರಾದ ನಾವುಗಳು ಕನ್ನಡವನ್ನು ಹೆಮ್ಮೆಯಿಂದ ನಮ್ಮ ಮಕ್ಕಳಿಗೆ ಕನ್ನಡದಲ್ಲಿ ಪ್ರಾಥಮಿಕ ಶಿಕ್ಷಣ ಕೊಡಿಸುವುದರ ಮುಖಾಂತರ ಕನ್ನಡವನ್ನು ಬೆಳೆಸುವ ಅನಿವಾರ್ಯತೆ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ  ಶ್ರೀಮತಿ ಗುಲಾಬಿ ಮರಿಯಪ್ಪ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಹೊಸನಗರ ಪಟ್ಟಣ ವರ್ತಕರ ಸಂಘದ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ್ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ರವರಿಗೆ ಸನ್ಮಾನಿಸಿದರು. ಸನ್ಮಾನದ ನಿರ್ವಹಣೆಯನ್ನು ವರ್ತಕರ ಸಂಘದ ಅಧ್ಯಕ್ಷ ವಿಜಯೇಂದ್ರ ಶೇಟ್ ನಿರ್ವಹಿಸಿದರು.


ಸಮಾರಂಭದ  ಅಧ್ಯಕ್ಷತೆಯನ್ನು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ.ನರಸಿಂಹ ವಹಿಸಿದ್ದರು.

ಸಭೆಯ ಮೊದಲಲ್ಲಿ ಕಸಾಪ ಸದಸ್ಯ ಹೆಚ್ .ಸಿ.ತಿಮ್ಮಪ್ಪ ಪ್ರಾರ್ಥನೆ ಮಾಡಿದರು. ಶಾಸಕರ ಮಾದರಿ ಶಾಲೆಯ ಮಕ್ಕಳು ನಾಡಗೀತೆಯನ್ನು ಹಾಡಿದರು. ಕುಮಾರಿ ಆರ್ವಿ  ಕ್ಯಾಸಿಯೋ ದಲ್ಲಿ ಕನ್ನಡ ಗೀತೆಗಳನ್ನು ನುಡಿಸಿದರು. ಸಭೆಯ ಮೊದಲಲ್ಲಿ ಕುಬೇಂದ್ರಪ್ಪ ಸರ್ವರನ್ನು ಸ್ವಾಗತಿಸಿದರು. ಕೊನೆಯಲ್ಲಿ ಡಾ.ಸುಧಾಕರ್ ವಂದಿಸಿದರು.  ಕಾರ್ಯಕ್ರಮವನ್ನು ತಾಲೂಕುಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಚ್ .ಆರ್. ಪ್ರಕಾಶ್ ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago