ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ  ಒಳಗಾದ ರೈತರಿಗೆ  ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್ ಗೌಡ ಒತ್ತಾಯಿಸಿದ್ದಾರೆ.

ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ  ಕಾಡಾನೆ ಹಾವಳಿ ಯಿಂದ ನಷ್ಟಕ್ಕೊಳಗಾದ  ರೈತರ ತೋಟಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ  ನಂತರ  ಮಾಧ್ಯಮದವರಿಗೆ ಮಾತನಾಡಿದ ಅವರು  ಕಳೆದ ಕೆಲವು ದಿನಗಳಿಂದ ಕಳಲೆ ಗ್ರಾಮದ ಸುತ್ತಮುತ್ತ ಕಾಡಾನೆ ಹಾವಳಿ ಹೆಚ್ಚಾಗಿದ್ದು ಅನೇಕ ರೈತರುಗಳ ಸಾಕಷ್ಟು ತೋಟಗಳು ಹಾನಿಗೊಳಗಾಗಿ ಸಾವಿರಾರು ರೂಪಾಯಿಗಳ ನಷ್ಟ ಸಂಭವಿಸಿದೆ ಈ ಕುರಿತು ಹಲವಾರು ಬಾರಿ ರೈತರುಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು ಸಹ ಗಮನಹರಿಸದೆ ರೈತರುಗಳ ಬೆಳೆಗಳ ನಷ್ಟಕ್ಕೆ ಕಾರಣರಾಗಿದ್ದಾರೆ.ರೈತರಿಗೆ ಪರಿಹಾರ ನೀಡುವುದರೊಂದಿಗೆ ಕೊಡಗು ಮಾದರಿಯಲ್ಲಿ ಕಾಡನೆಯಿಂದ ರಕ್ಷಣೆ ಪಡೆಯಲು ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕು ಎಂದರು.

ಈ ಸಂಬಂಧ ಸ್ಥಳದಿಂದಲೇ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಪ್ ಒ ಐ ಎಂ ನಾಗರಾಜ್ ಗೆ ಕರೆ ಮಾಡಿ ವಸ್ತುಸ್ಥಿತಿ ವಿವರಿಸಿ ಕೂಡಲೇ ಆನೆಗಳನ್ನು ಸ್ಥಳಾಂತರಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೇಳಿದರು.

ನಂತರ ಸಕ್ರೆಬೈಲಿನಿಂದ ಕಾರ್ಯಾಚರಣೆಗೆ ಬಂದಿರುವ ಮೂರು ಪರಿಣಿತ ಆನೆಗಳಾದ ಭಾನುಮತಿ,ಸೋಮಣ್ಣ ಹಾಗೂ ರಾಘವೇಂದ್ರ ಇರುವ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯ ಬಗ್ಗೆ ಡಾ| ವಿನಯ್ ಬಳಿ  ಸಂಪೂರ್ಣ ಮಾಹಿತಿ ಪಡೆದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಅಮೀರ್ ಹಂಜಾ,ರಿಪ್ಪನ್ ಪೇಟೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಹೆದ್ದಾರಿಪುರ ಗ್ರಾಪಂ ಸದಸ್ಯರಾದ ಪ್ರವೀಣ್ ಸುಳುಗೋಡು,ಮುಖಂಡರಾದ ಡಾಕಪ್ಪ,ಮಳವಳ್ಳಿ ಮಂಜುನಾಥ್,ಉಲ್ಲಾಸ್ ತೆಂಕೋಲ್,
ರೈತ ಮುಖಂಡರಾದ ಈಶ್ವರಪ್ಪ ಗೌಡ ಕುಕ್ಕಳಲೆ,ಚಂದ್ರಶೇಖರ್ ಮಳವಳ್ಳಿ,ವಿಜಯ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

3 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

10 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

11 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

15 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

19 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

22 hours ago