ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆಗೆ ಸಜ್ಜುಗೊಂಡಿರುವುದಾಗಿ ಹಾಗೂ ಕಾರ್ಯಾಚರಣೆಗೆ ಸಕ್ರೇಬೈಲಿನ ಮೂರು ಆನೆಗಳನ್ನು ತರಿಸಿದ್ದು ಶ್ರೀಘ್ರ ಕಾರ್ಯಪ್ರೌವೃತ್ತರಾಗುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟ ಮಾಜಿ ಸಚಿವರು ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ ಕಾಡಾನೆ ಹಿಡಿಯುವ ಕಾರ್ಯವು ಅರಣ್ಯ ಇಲಾಖೆಯ ವ್ಯಾಪ್ತಿಯ ಪ್ರಧಾನಕಾರ್ಯದರ್ಶಿಯವರ ಮಟ್ಟದಲ್ಲಿ ತೆಗೆದುಕೊಳ್ಳಬಹುದಾದ ತೀರ್ಮಾನವಾಗಿದೆ. ಇದಕ್ಕೆ ಕೆಲ ದಿನಗಳ ಸಮಯಾವಕಾಶವು ಬೇಕಾಗುತ್ತದೆ. ಈ ಪ್ರಕ್ರಿಯೆಗೆ ಮುಖ್ಯಮಂತ್ರಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆಯುತ್ತೇನೆ. ಇಲಾಖೆ ಕಾಡಾನೆ ಓಡಿಸುತ್ತೇವೆಂದು ಜನರಿಗೆ ಮರಳು ಮಾಡುವುದು ಬೇಡ. ಒಮ್ಮೆಬಂದ ಕಾಡಾನೆ ಕೆಲವು ದಿನಗಳ ನಂತರ ಮತ್ತದೇ ಜಾಗಕ್ಕೆ ಬರುವುದು ಅದರ ಸ್ವಭಾವÀ. ಅದಕ್ಕಾಗಿ ಈ ಭಾಗದ ಜನರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ. ಈಗಾಗಲೆ ಅಪಾರಪ್ರಮಾಣದ ಬೆಳೆ ನಾಶದಿಂದ ಹಲವು ರೈತರು ಜಿಗುಪ್ಸೆಗೊಂಡಿದ್ದಾರೆ. ಇಲ್ಲಿನ ಜನರ ಬೆಳೆ ಹಾಗೂ ಜೀವರಕ್ಷಣೆಗೆ ಇಲಾಖೆ ತ್ವರಿತ ಕ್ರಮ ಜರುಗಿಸಬೇಕು ಎಂದು ಸ್ಥಳದಲ್ಲಿದ್ದ ಆರ್‍ಎಫ್‍ಓ ಅಫ್ರಿನಾಜ್ ಶುಂಠಿರವರಿಗೆ ಸೂಚಿಸಿದರು.
ಕಾಡಾನೆ ದಾಳಿಯು ಹಲವು ದಿನಗಳಿಂದ ನಡೆಯುತ್ತಿದ್ದರು, ರೈತರನ್ನು ರಕ್ಷಿಸುವ ಯಾವುದೇ ಕ್ರಮ ಕೈಗೊಂಡಿಲ್ಲ ಇದರ ಪರಿಣಾಮ ಕಾಡನೆಗಳು ನಿರಂತರ ಬೆಳೆನಷ್ಟಮಾಡುತ್ತಿವೆ. ರೈತರ ಸಮಸ್ಯೆಗೆ ಇತಿಶ್ರೀ ಹಾಡಬೇಕಾದರೆ ಹೆದ್ದಾರಿಪುರ ಮತ್ತು ಅರಸಾಳು  ಭಾಗದಲ್ಲಿ ಕಾಡಾನೆಗಳು ಮತ್ತೆಬರದಂತೆ ಶಾಶ್ವತ ಪರಿಹಾರ ಯೋಜನೆ ರÀೂಪಿಸಬೇಕೆಂದು ದೂರವಾಣಿ ಮೂಲಕ ಶಿವಮೊಗ್ಗ ವನ್ಯ ಜೀವಿ ವಿಭಾಗದ ಡಿ.ಎಫ್.ಓ. ಐ.ಎಂ.ನಾಗರಾಜ್‍ಗೆ  ತಾಕೀತು ಮಾಡಿದರು.
ಕಾಡಾನೆದಾಳಿಯಿಂದ ರೈತರು ಅಡಿಕೆ, ತೆಂಗು, ಬಾಳೆ ಕಬ್ಬು ಇನ್ನಿತರ ಬೆಳೆಗಳನ್ನು ಕಳೆದುಕೊಂಡು ನಷ್ಟ ಅನುಭವಿಸಿದ್ದಾರೆ. ಸಂಕಷ್ಟಕ್ಕೊಳಗಾದ  ಎಲ್ಲಾ ರೈತರಿಗೂ ಸಮಗ್ರ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ದಾಳಿಗೊಳಗಾದ ಸುಳಕೋಡು, ಕಾರೆಹೊಂಡ ಗ್ರಾಮದ ತೋಟಗಳಿಗೆ ಭೇಟಿನೀಡಿದರು.
ಕಾಡಾನೆ ಹಿಮ್ಮೆಟ್ಟಿಸಲು ಸಜ್ಜುಗೊಂಡ ಇಲಾಖೆ:
ಈಗಾಗಲೇ ಕೆಲದಿನಗಳಿಂದ ರೈತರ ಜಮೀನುಗಳಿಗೆ ನುಗ್ಗಿ ಬೆಳೆನಷ್ಟ ಮಾಡುತ್ತಿದ್ದ ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಸಕ್ರೆಬೈಲಿನಿಂದ ಮೂರು ಪರಿಣಿತ ಆನೆಗಳನ್ನು ತರಿಸಲಾಗಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶಕರಾಗಿ ಎಂಟು ಮಾವುತ ಸಿಬ್ಬಂದಿಗಳು ನಿಯೋಜನೆಗೊಂಡಿದ್ದಾರೆ. ಸ್ಥಳೀಯ ಅರಣ್ಯ ಇಲಾಖಾ ಸಿಬ್ಬಂದಿಗಳು ಕಾಡಾನೆ ಚಲನವಲನಗಳ ಮಾಹಿತಿಯನ್ನು ನೀಡುತ್ತ ಕಾರ್ಯಾಚರಣೆಗೆ ಸಹಕರಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಕಾಡಾನೆಗಳನ್ನು ಹಿಮ್ಮೆಟ್ಟಿಸಲಾಗುವುದೆಂದು ಡಾ||  ವಿನಯ್ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಕಲಗೋಡು ರತ್ನಾಕರ, ಬಂಡಿ ರಾಮಚಂದ್ರ, ಗ್ರಾ.ಪಂ.ಸದಸ್ಯ ಪ್ರವೀಣ್ ಸುಳಕೋಡು, ಮಂಜುನಾಥ, ಗೌರಮ್ಮ, ಈಶ್ವರಪ್ಪ ಕುಕ್ಕಳಲೆ, ಸುರೇಶ, ಓಂರಾಜ, ಶೇಷಪ್ಪ, ಲೋಕಪ್ಪಗೌಡ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

9 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

10 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

14 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

18 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

21 hours ago