1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್ ಕಾರ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ರಸ್ತೆ ನಿರ್ಮಾಣಕ್ಕೆ ಪರಿಸರ ಇಲಾಖೆಯ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ಸ್ವೀಕರಿಸಿರುವ ಕೇಂದ್ರ ಸಚಿವರು ಸಭೆಯಲ್ಲಿ ಅನುಮೋದನೆಯನ್ನು ಸಹ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಡಿಸಿಸಿ ಬ್ಯಾಂಕ್‌ಅಧ್ಯಕ್ಷ ಚನ್ನವೀರಪ್ಪ, ನಿರ್ದೇಶಕ ಅಗಡಿ ಅಶೋಕ್,ಶಿಮುಲ್ ನಿರ್ದೇಶಕ ಸಿದ್ದಲಿಂಗಪ್ಪ, ಭೋವಿ ನಿಗಮದ ನಿರ್ದೇಶಕ ಸಣ್ಣಹನುಮಂತಪ್ಪ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಸವಿತಾ ಶಿವಕುಮಾರ್, ಕೆಎಸ್‌ಡಿಎಲ್ ನಿರ್ದೇಶಕಿ ನಿವೇದಿತಾ ರಾಜು, ಪುರಸಭೆ ಅಧ್ಯಕ್ಷೆ ಮಂಜುಳಾ ರಾಜು,ಉಪಾಧ್ಯಕ್ಷೆ ರಾಜೇಶ್ವರಿ ವಸಂತ, ಮುಖ್ಯಾ ಧಿಕಾರಿ ಹೇಮಂತ್, ಟೌನ್ ಬಿಜೆಪಿ ಅಧ್ಯಕ್ಷ ಮಂಚಿ ಶಿವಣ್ಣ,ಕಾಲೇಜು ಕಾರ್ಯಾಧ್ಯಕ್ಷ ಎನ್.ಟಿ. ರಾಜಶೇಖರಪ್ಪ, ಉದ್ಯಮಿ ಎಂ.ಆರ್. ಸತೀಶ್, ನಾಗಿಹಳ್ಳಿ ಗಣೇಶ್ ಇದ್ದರು.