ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ.


ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿ ರೈತರುಗಳು ತಮ್ಮ ಹೊಲಗದ್ದೆಗಳಿಗೆ ಹೋಗದಂತೆ ಅಡ್ಡಿ ಉಂಟು ಮಾಡಿದ್ದಾರೆ ಎಂದು ತಮ್ಮ ಅಳಲನ್ನು ಮಾಧ್ಯಮದವರಲ್ಲಿ ತೋರಿಕೊಂಡಿದ್ದಾರೆ.

ಜೇನಿ ಗ್ರಾಮ ಪಂಚಾಯಿತಿಯ ಅನುದಾನದಿಂದ ಆಗಿನ ಅದೇ ವಾರ್ಡಿನ ಗ್ರಾಪಂ ಸದಸ್ಯರಾದ ಸ್ವಾಮಿ ರವರು ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡಲು ಹಾಗೂ ರೈತ ಪರಿಕರಗಳನ್ನು ತಮ್ಮ ಹೊಲಗದ್ದೆಗಳಿಗೆ ಸಾಗಿಸಲು ಅನುಕೂಲವಾಗುವಂತೆ  ಕಳೆದ ಕೆಲವು ದಶಕಗಳ ಹಿಂದೆ ರಸ್ತೆ ನಿರ್ಮಾಣ ಮಾಡಿಕೊಟ್ಟಿದ್ದರು.


ಆದರೆ ಈಗ ಅದೇ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯು ಕಬ್ಬಿಣದ ಗೇಟಿನ ನಿರ್ಮಾಣಮಾಡಿ ಬೀಗ ಹಾಕಿ ರೈತರುಗಳು ತಮ್ಮ ಹೊಲಗಳಿಗೆ ಹೋಗದಂತೆ ತಡೆದಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು ಮತ್ತು ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಭೂಮಾಲಿಕನೊಬ್ಬ ಕಬ್ಬಿಣದ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ಓಡಾಡದಂತೆ ಮಾಡಿರುವ ಬಗ್ಗೆ ಈಗಾಗಲೇ ಗ್ರಾಮಾಡಳಿತಕ್ಕೆ ಚುನಾಯಿತ ಪ್ರತಿನಿಧಿಗಳಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು ಸಹ ಮಾಲೀಕನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ರೈತರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ಮಾಡಿ ಬೀಗ ಹಾಕಿರುವುದನ್ನು ತೆರವುಗೊಳಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಹೊಸಳ್ಳಿ ರೈತ ರವಿ ತಮ್ಮ ಅಳಲನ್ನು ಮಾಧ್ಯಮಗಳ ಎದುರಿಗೆ ತೋರಿಕೊಂಡಿದ್ದಾರೆ.

ಈಗಾಗಲೇ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಲು ಸೂಚಿಸಿದ್ದರು ಸಹ ಗ್ರಾಮಾಡಳಿತ  ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಾದರೂ ಗ್ರಾಮಾಡಳಿತ ಚುನಾಯಿತ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಗ್ರಾಮಠಾಣ ರಸ್ತೆಗೆ ಕಬ್ಬಿಣದ ಗೇಟನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಮಾಡಿ ಕೊಡುತ್ತಾರೋ ಎಂದು ಕಾದು ನೋಡಬೇಕು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

17 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

21 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

23 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago