ರಿಪ್ಪನ್ ಪೇಟೆ: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ ತೆರೆಯುವಿಕೆಯಿಂದ ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಇಂಗ್ಲಿಷ್ ಭಾಷೆಯ ಬಳಕೆಯ ದುರುಪಯೋಗ ಸಿಗುತ್ತದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಅಮೃತ ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಎರಡು ಕೋಟಿ ರೂ ವೆಚ್ಚದ ಕರ್ನಾಟಕ ಪಬ್ಲಿಕ್ ಸ್ಕೂಲಿನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಹೈಟೆಕ್ ಮಾದರಿಯ ಶಿಕ್ಷಣವನ್ನು ನೀಡಲು ಮುಂದಾಗಿದ್ದು ಪೋಷಕರು ಮತ್ತು ಶಿಕ್ಷಕರು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ವದ ಸ್ಥಾನವನ್ನು ಪಡೆದಿರುತ್ತಾರೆ. ಆದ್ದರಿಂದ ಸಮಾಜದಲ್ಲಿನ ಪ್ರತಿಯೊಬ್ಬರು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕೈಜೋಡಿಸಿದರೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರು.
ನ್ಯಾಯಾಲಯದ ನಿರ್ದೇಶನವನ್ನು ಪ್ರತಿಯೊಬ್ಬರು ಪಾಲಿಸಲೇಬೇಕು :
ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವೆಂದು ನಾಯಾಲಯ ಈಗಾಗಲೇ ಆದೇಶವನ್ನು ನೀಡಿದ್ದು ಪ್ರತಿಯೊಬ್ಬ ಪೋಷಕರು ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಹಾಗೆಯೇ ತಮ್ಮ ಮಕ್ಕಳಿಗೆ ಸಮವಸ್ತ್ರದ ಕುರಿತು ಅರಿವು ಮೂಡಿಸಬೇಕು. ಕೆಲವೇ ಕೆಲವು ವ್ಯಕ್ತಿಗಳ ಕಿಡಿಗೇಡಿತನದಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಅದರ ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀರುತ್ತಿದೆ . ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎನ್ನುವುದು ಸರಕಾರದ ಆಶಯವಾಗಿದ್ದು ಪೋಷಕರು ಇದಕ್ಕೆ ಸಹಕಾರ ನೀಡಬೇಕು. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಗಾಜುನೂರು ಹಾಗೂ ಅಮೃತ ಸೇರಿದಂತೆ ಮೂರು ಗ್ರಾಮಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗಿದ್ದು ಸರ್ಕಾರದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೈದ್ಯ ರತ್ನ ಡಾ. ಜಿ.ಡಿ.ನಾರಾಯಣಪ್ಪ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ಬಿಎಸ್ ಪುರುಷೋತ್ತಮ. ಬಂಡಿ ರಾಮಚಂದ್ರ. ಅಮೃತ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷೆ ಮಂಜುಳಾ. ಉಪಾಧ್ಯಕ್ಷ ಬಂಡಿ ಲಿಂಗರಾಜು .ಶಿವಮೊಗ್ಗ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್ ಕಾಗಲ್ಕರ್. ಶಿವಮೊಗ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ಎಮ್. ರಮೇಶ್. ಕ್ಷೇತ್ರಶಿಕ್ಷಣಾಧಿಕಾರಿ ವೀರಭದ್ರಪ್ಪ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ. ಕರ್ನಾಟಕ ಪಬ್ಲಿಕ್ ಸ್ಕೂಲ್ ಸಮಿತಿಯ ಕಾರ್ಯಧ್ಯಕ್ಷ ಟಿ. ಡಿ.ಸೋಮಶೇಖರ್. ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜ್ ಹತ್ ಉಲ್ಲಾ ಸೇರಿದಂತೆ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರುಗಳು. ಕರ್ನಾಟಕ ಪಬ್ಲಿಕ್ ಸ್ಕೂಲಿನ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಇನ್ನಿತರರು ಹಾಜರಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪರವಾಗಿ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಮಾಜಿ ಶಾಸಕರಾದ ಡಾ. ಜಿ
ಡಿ.ನಾರಾಯಣಪ್ಪ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಬಿ.ಎಸ್. ಪುರುಷೋತ್ತಮ್. ಬಂಡಿ ರಾಮಚಂದ್ರ. ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಗಳು. ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ನೌಕರ ರಾಘುರವರನ್ನು ಸೇರಿದಂತೆ 15ಕ್ಕೂ ಅಧಿಕ ನಾಗರಿಕರಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇನ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.