w
Headlines
Home » ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.

2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು. 

ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ ಸೇರಿದಂತೆ ಹಿಂದೂ ಸಂಪ್ರದಾಯ ಮೇಳೈಸಿತ್ತು. ಆಸೀಸ್ ಕ್ರಿಕೆಟಿಗನ ಜೊತೆ ವಿನಿ ರಾಮನ್ ಸಪ್ತಪದಿ ತುಳಿದಿದ್ದಾರೆ.


2017ರಿಂದ ವಿನಿ ರಾಮನ್ ಜೊತೆ ಡೇಟಿಂಗ್ ನಡೆಸುತ್ತಿದ್ದ ಮ್ಯಾಕ್ಸ್‌ವೆಲ್ ಇದೀಗ ಮದುವೆ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರನಾಗಿರುವ ಮ್ಯಾಕ್ಸ್‌ವೆಲ್ ಶೀಘ್ರದಲ್ಲೇ ಆರ್‌ಸಿಬಿ ಸೇರಿಕೊಳ್ಳಲಿದ್ದಾರೆ.

ಮ್ಯಾಕ್ಸ್‌ವೆಲ್ ಮದುವೆ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಹಲವರು ವಣಕ್ಕಮ್ ಮಾಪ್ಲೇ ಅಂತಾ ತಮಿಳಿನಲ್ಲಿ ಮ್ಯಾಕ್ಸಿ ಕರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು, ಕ್ರಿಕೆಟಿಗರು ಸೇರಿದಂತೆ ಹಲವರು ಹೊಸ ಬದುಕಿಗೆ ಕಾಲಿಟ್ಟ ಮ್ಯಾಕ್ಸ್‌ವೆಲ್ ಹಾಗೂ ವಿನಿ ರಾಮನ್‌ಗೆ ಶುಭಾಶಯ ಕೋರಿದ್ದಾರೆ. ವಿನಿ ರಾಮನ್‌ ಔಷಧ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. 

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.