ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.
2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.
ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ ಸೇರಿದಂತೆ ಹಿಂದೂ ಸಂಪ್ರದಾಯ ಮೇಳೈಸಿತ್ತು. ಆಸೀಸ್ ಕ್ರಿಕೆಟಿಗನ ಜೊತೆ ವಿನಿ ರಾಮನ್ ಸಪ್ತಪದಿ ತುಳಿದಿದ್ದಾರೆ.
2017ರಿಂದ ವಿನಿ ರಾಮನ್ ಜೊತೆ ಡೇಟಿಂಗ್ ನಡೆಸುತ್ತಿದ್ದ ಮ್ಯಾಕ್ಸ್‌ವೆಲ್ ಇದೀಗ ಮದುವೆ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರನಾಗಿರುವ ಮ್ಯಾಕ್ಸ್‌ವೆಲ್ ಶೀಘ್ರದಲ್ಲೇ ಆರ್‌ಸಿಬಿ ಸೇರಿಕೊಳ್ಳಲಿದ್ದಾರೆ.
ಮ್ಯಾಕ್ಸ್‌ವೆಲ್ ಮದುವೆ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಹಲವರು ವಣಕ್ಕಮ್ ಮಾಪ್ಲೇ ಅಂತಾ ತಮಿಳಿನಲ್ಲಿ ಮ್ಯಾಕ್ಸಿ ಕರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು, ಕ್ರಿಕೆಟಿಗರು ಸೇರಿದಂತೆ ಹಲವರು ಹೊಸ ಬದುಕಿಗೆ ಕಾಲಿಟ್ಟ ಮ್ಯಾಕ್ಸ್‌ವೆಲ್ ಹಾಗೂ ವಿನಿ ರಾಮನ್‌ಗೆ ಶುಭಾಶಯ ಕೋರಿದ್ದಾರೆ. ವಿನಿ ರಾಮನ್ ಔಷಧ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್